ಚಿತ್ರದುರ್ಗ:ಹೊಸದುರ್ಗ ತಾಲೂಕಿನ ಕೈನಡು ಗ್ರಾಮದ ಬಳಿ ಟ್ಯಾಂಕರ್​ ಮತ್ತು ಬೈಕ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ದುರ್ಮರಣಕ್ಕೀಡಾಗಿದ್ದಾರೆ.
ಕೈನಡು ಗ್ರಾಮದ ಉಜ್ಜೀರಪ್ಪ(38), ರವಿಕುಮಾರ್(29) ಮತ್ತು ಗಿರೀಶ್(23) ಮೃತ ದುರ್ದೈವಿಗಳು. ನಿನ್ನೆ(ಶನಿವಾರ) ತಡರಾತ್ರಿ ಹೊಸದುರ್ಗದಿಂದ ಕೈನಡು ಗ್ರಾಮಕ್ಕೆ ಮೂವರು ಬೈಕ್​ನಲ್ಲಿ ಬರುತ್ತಿದ್ದರು. ಈ ವೇಳೆ ಟ್ಯಾಂಕರ್​ ರೂಪದಲ್ಲಿ ಬಂದ ಜವರಾಯ ಮೂವರ ಪ್ರಾಣ ಹೊತ್ತೊಯ್ದಿದ್ದಾನೆ.
ಮೂವರ ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಓರ್ವನ ದೇಹ ನಜ್ಜುಗುಜ್ಜಾಗಿದೆ. ಅಪಘಾತದ ಭೀಕರತೆಗೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಕೈನಡು ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಶ್ರೀರಾಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.(ದಿಗ್ವಿಜಯ ನ್ಯೂಸ್​, ಚಿತ್ರದುರ್ಗ)
ಡೀಸೆಲ್​ ಖಾಲಿಯಾಗಿ ರಸ್ತೆಯಲ್ಲೇ ನಿಂತ ಆಂಬುಲೆನ್ಸ್​ ಅನ್ನು ತಳ್ಳಿಕೊಂಡೇ ಹೋದ ಮಗಳು-ಅಳಿಯ! ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಅಪ್ಪ ಸಾವು

ವಿಡಿಯೋ ವೈರಲ್​ ಆಗ್ತಿದ್ದಂತೆ ಬಿಡದಿ ಆಸ್ಪತ್ರೆ ವೈದ್ಯೆಯರಿಬ್ಬರ ಅಮಾನತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + sixteen =
Remember me
