ಕಲಬುರಗಿ:ಆಯಿಲ್ ಟ್ಯಾಂಕರ್ ಮತ್ತು ಸ್ವಿಫ್ಟ್ ಕಾರೊಂದರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬರ ತೀವ್ರ ಗಾಯಗೊಂಡಿದ್ದು ಪರಿಸ್ಥಿತಿ ಗಂಭೀರವಾಗಿದೆ. ಕಲಬುರಗಿ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದೆ.
ಕಲಬುರಗಿ ಹೊರವಲಯದ ಶಹಬಾದ್ ರಸ್ತೆಯ ಶೆಟ್ಟಿ ಕಾಲೇಜು ಬಳಿ ಕಾರು-ಟ್ಯಾಂಕರ್ ಡಿಕ್ಕಿ ಆಗಿವೆ. ಅಪಘಾತದ ತೀವ್ರತೆಗೆ ಕಲಬುರಗಿ ನಿವಾಸಿಗಳಾದ ಅಮಿತ್ (21), ಆದಶ್೯ (22) ಎಂಬಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮಹಾಂತೇಶ್ ಎಂಬವರ ಪರಿಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುವನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕಾರು ಕಲಬುರಗಿಯಿಂದ ಶಹಬಾದ್‌ನತ್ತ ಹೊರಟಿತ್ತು. ಟ್ಯಾಂಕರ್​ ಶಹಬಾದ್​ನಿಂದ ಕಲಬುರಗಿ ಕಡೆಗೆ ಬರುತ್ತಿತ್ತು. ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಕಲಬುರಗಿ ಸಂಚಾರಿ-2 ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಅಸ್ತಿತ್ವಕ್ಕಾಗಿ ಹೋರಾಡುವ ಪಕ್ಷಗಳನ್ನು ನೋಡಿ ನಗಬೇಡಿ: ಮೋದಿ ಹೀಗಂದಿದ್ದೇಕೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
