ಮೈಸೂರು:ಮುಖ್ಯಮಂತ್ರಿ ಆಗುವ ಅರ್ಹತೆ ನನಗೂ ಇದೆ. ಜನರಿಂದ ಆಯ್ಕೆಯಾದವರು ಅಂತಹ ಬಯಕೆ ಇಟ್ಟುಕೊಳ್ಳಬಾರದು ಅಂಥೇನಿಲ್ಲ ಎಂದು ಶಾಸಕ ತನ್ವೀರ್​ ಸೇಠ್​ ಹೇಳಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ತನ್ವೀರ್​ ಸೇಠ್​, “ಉಪ ಚುನಾವಣೆ ಬಳಿಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿದ್ದಾರೆ’ ಎಂಬ ಶಾಸಕ ಜಮೀರ್​ ಅಹಮದ್​ ಹೇಳಿಕೆಗೆ ತಿರುಗೇಟು ನೀಡಿದರು. ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದು ಪಕ್ಷದ ವರಿಷ್ಠರ ತೀರ್ಮಾನವೇ ಹೊರತು ಜಮೀರ್​ ಹೇಳಿದಂತೆ ಆಗುವುದಿಲ್ಲ. ಜಮೀರ್​ಗೆ ಕಾಂಗ್ರೆಸ್​ ಪಕ್ಷದ ಸಿದ್ಧಾಂತವೇ ತಿಳಿದಿಲ್ಲ. ಅವರು ಹೇಳಿದಂತೆ ಯಾವುದೂ ಆಗುವುದಿಲ್ಲ. ಮುಖ್ಯಮಂತ್ರಿ ಆಗಲು ಅಂಕಿ-ಸಂಖ್ಯೆ ಮುಖ್ಯ. ನಾಯಕನಾದವನ ಬಳಿ ಸಂಖ್ಯೆ ಇದ್ದರೆ ಮಾತ್ರ ಸಿಎಂ ಆಗಬಹುದು. ಇಷ್ಟಕ್ಕೂ ಸಿಎಂ ಯಾರಾಗಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ ಎಂದರು.
ಮುಂದೆ ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದು ಸದ್ಯಕ್ಕೆ ಮುಖ್ಯವಲ್ಲ. ಬದಲಿಗೆ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬರಬೇಕು. ಬಿಜೆಪಿ ದುರಾಡಳಿತದಿಂದ ಜನತೆ ಬೇಸತ್ತಿದ್ದಾರೆ. ಮುಂದೆ ಕಾಂಗ್ರೆಸ್​ ಅಧಿಕಾರಕ್ಕೆ ಬರುವಲ್ಲಿ ಯಾವುದೇ ಸಂಶಯವಿಲ್ಲ. ಬಂದಾಗ ಅಂಕಿ-ಸಂಖ್ಯೆಗೆ ಅನುಗುಣವಾಗಿ ಹೈಕಮಾಂಡ್​ ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ತನ್ವೀರ್​ ಸೇಠ್​ ಹೇಳಿದರು.
VIDEO| ಸಮಾವೇಶದಲ್ಲೇ ಕುಸಿದುಬಿದ್ದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ!

ಚಿತ್ರನಟ ದರ್ಶನ್ ಓಡೋಡಿ ಬರಲು ಡಿಕೆಶಿ ಹಸು ಅಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 13 =
Remember me
