ಬೆಂಗಳೂರು:ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯ ಚೇತರಿಕೆಗಾಗಿ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರು ಬಸವನಗುಡಿಯ ದೊಡ್ಡ ಗಣೇಶ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಶ್ರೀ. ಎಚ್. ಡಿ.ಕುಮಾರಸ್ವಾಮಿ ರವರು ಆರೋಗ್ಯದಲ್ಲಿ ಶೀಘ್ರ ಚೇತರಿಕೆಯಾಗಿ ಮತ್ತೆ ಜನಸೇವೆ ಮಾಡುವಂತಾಗಲಿ ಎಂದು ಇಂದು ಬಸವನಗುಡಿಯ ದೊಡ್ಡಗಣೇಶ ದೇವಾಲಯದಲ್ಲಿ ಕ್ಷೀರಾಭಿಷೇಕ ಮತ್ತು ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

ಲಘು ಪಾರ್ಶ್ವವಾಯುವಿಗೆ ಒಳಗಾಗಿದ್ದ ಕುಮಾರಸ್ವಾಮಿ ಅವರು ಜಯನಗರದ ಅಪೋಲೋ ಆಸ್ಪತ್ರೆಗೆ ಬುಧವಾರ ದಾಖಲಾಗಿದ್ದರು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ಎಚ್​​ಡಿಕೆ ಅವರನ್ನು ಗುರುವಾರ ಐಸಿಯುನಿಂದ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ.

ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ತಮ್ಮ ತಂದೆ ವೇಗವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ‘ವೈದ್ಯರ ಸಲಹೆಯಂತೆ ಅವರು ಕೆಲವು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುತ್ತಾರೆ. ನಂತರ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಗುರುವಾರ ಮಾಹಿತಿ ನೀಡಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ; ಐಸಿಯುನಿಂದ ವಾರ್ಡ್​​​ಗೆ ಶಿಫ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 16 =
Remember me
