ಬೆಂಗಳೂರು:ಏಕ ಬಳಕೆ ಪ್ಲಾಸ್ಟಿಕ್ ಪರಿಸರಕ್ಕೆ ಮಾರಕವಾಗಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಮಾರ್ಷಲ್ ಗಳನ್ನು ಒಳಗೊಂಡ ಕಾರ್ಯಪಡೆ ರಚಿಸಿ ಏಕ ಬಳಕೆ ಪ್ಲಾಸ್ಟಿಕ್ ಮತ್ತು ಅದರ ಉತ್ಪನ್ನಗಳ ಮಾರಾಟ, ದಾಸ್ತಾನು ಮತ್ತು ಸಾಗಾಟಕ್ಕೆ ಸಂಪೂರ್ಣ ಕಡಿವಾಣ ಹಾಕುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಕನ್ವರ್ ಯಾತ್ರೆ ಆಹಾರ ಮಳಿಗೆಗಳಿಗೆ ಆದೇಶ ವಿವಾದ: ಉತ್ತರ ಪ್ರದೇಶದ ನಡೆಗೆ ಸುಪ್ರೀಂ ಕೋರ್ಟ್ ತಡೆ
ವಿಕಾಸಸೌಧದ ಕಚೇರಿಯಲ್ಲಿಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಎಲ್ಲಾ ಜಿಲ್ಲಾ ಕೇಂದ್ರದಲ್ಲೂ ತಂಡ ರಚಿಸಿ, ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳಾದ ಕ್ಯಾರಿಬ್ಯಾಗ್, ಚಮಚ, ತಟ್ಟೆ, ಲೋಟ ಇತ್ಯಾದಿ ತಯಾರಿಸುವ ಘಟಕಗಳು, ಗೋದಾಮು ಮತ್ತು ಮಾರಾಟ ಮಳಿಗೆಗಳ ಮೇಲೆ ನಿಗಾ ಇಟ್ಟು, ದಾಳಿ ನಡೆಸಿ ಪ್ರಕರಣ ದಾಖಲಿಸುವಂತೆ ಸೂಚಿಸಿದರು.
ಏಕ ಬಳಕೆ ಪ್ಲಾಸ್ಟಿಕ್ ಮತ್ತು ಪ್ಲಾಸ್ಟಿಕ್ ಉತ್ಪನ್ನಗಳು ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುವುದನ್ನು ನಿಯಂತ್ರಿಸಲು ಸಾರಿಗೆ, ಪೊಲೀಸ್, ವಾಣಿಜ್ಯ ತೆರಿಗೆ ಸೇರಿದಂತೆ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವಂತೆಯೂ ತಿಳಿಸಿದರು. ಪರಿಸರ ಸ್ನೇಹಿ ಗಣಪತಿಗೆ ಉತ್ತೇಜನ: ಗಣೇಶೋತ್ಸವಕ್ಕೆ ಇನ್ನು ಒಂದು ತಿಂಗಳಷ್ಟೇ ಬಾಕಿ ಇರುವ ಹಿನ್ನೆಲೆಯಲ್ಲಿ ಪಿಓಪಿ ಗಣೇಶಮೂರ್ತಿ ಪೂಜೆ ತ್ಯಜಿಸಲು ಮತ್ತು ಪರಿಸರ ಸ್ನೇಹಿ ಗಣಪತಿ ಮೂರ್ತಿಗಳ ಪೂಜೆಗೆ ಉತ್ತೇಜನ ನೀಡಲು ಸಾಮಾಜಿಕ ಜಾಲ ತಾಣ ಹಾಗೂ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸುವಂತೆ ಸೂಚಿಸಿದರು.
ಗಣಪತಿ ಹಬ್ಬದ ಸಂದರ್ಭದಲ್ಲೂ ರಾಜ್ಯದ ಕೆಲವೆಡೆ ಪಟಾಕಿ ಸಿಡಿಸುವ ಸಂಪ್ರದಾಯವಿದ್ದು, ಹಸಿರು ಪಟಾಕಿ ಮಾತ್ರ ಬಳಸುವಂತೆ ಹಾಗೂ ಪರಿಸರಕ್ಕೆ ಹಾನಿಯಾಗುವ ಭಾರಲೋಹಯುಕ್ತ ಪಟಾಕಿ ಬಳಸದಂತೆ ಜಾಗೃತಿ ಮೂಡಿಸಲು ಸೂಚಿಸಿದರು.
ತೀವ್ರ ಮಾಲಿನ್ಯ ಹರಡುವ ಕೈಗಾರಿಕೆ ವಿರುದ್ಧ ಕ್ರಮ: ಟೈರ್ ಪೈರೋಲಿಸಿಸ್ ಸೇರಿದಂತೆ ಅತಿ ಹೆಚ್ಚು ಇಂಗಾಲ ಮತ್ತು ಇಂಗಾಲದ ಡೈಆಕ್ಸೈಡ್ ಹೊರಸೂಸುವ, ರಾಸಾಯನಿಕ ತ್ಯಾಜ್ಯ ಮತ್ತು ಬಳಸಿದ ತೈಲವನ್ನು ಕೊಳವೆ ಬಾವಿಗೆ ಸುರಿಯುವ, ರಾಸಾಯನಿಕ ಯುಕ್ತ ತ್ಯಾಜವನ್ನು ಜಲ ಮೂಲಗಳಿಗೆ ಸಂಸ್ಕರಿಸದೆ ಹರಿಸುವ ಕೈಗಾರಿಕಾ ಘಟಕಗಳ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸುವಂತೆಯೂ ಸೂಚಿಸಿದರು.
ರಾಜ್ಯದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್‌ ನೇಮಕ; ಪತಿ ನಿವೃತ್ತಿ ಬೆನ್ನಲ್ಲೇ, ಪತ್ನಿಗೆ ಹುದ್ದೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
