ಕೋಲಾರ:ಗುರುವನ್ನು ತಂದೆಗೆ ಸಮಾನ ಎಂದು ಭಾರತೀಯ ಸಂಸ್ಕೃತಿಯಲ್ಲಿ ಹೇಳಲಾಗುತ್ತೆ. ಆದರೆ ಇಲ್ಲೊಬ್ಬ ಶಿಕ್ಷಕ, ವಿದ್ಯಾರ್ಥಿನಿಯರೊಡನೆ ಅಸಭ್ಯವಾಗಿ ವರ್ತಿಸಿ ಸಾರ್ವಜನಿಕರ ಆಕ್ರೋಶಕ್ಕೆ ಒಳಗಾಗಿದ್ದಾರೆ. ವಿಚಿತ್ರ ಎಂದರೆ ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೂ ಇದೇ ರೀತಿಯ ಆರೋಪಗಳು ಕೇಳಿಬಂದಿದ್ದವು.
ಕೋಲಾರದಲ್ಲಿ ಹತ್ತನೇ ತರಗತಿ ವಿಧ್ಯಾರ್ಥಿನಿ ಜೊತೆಗೆ ಅನುಚಿತ ವರ್ತನೆ ಮಾಡಿದ ಶಿಕ್ಷಕನನ್ನು ಅಮಾನತು ಮಾಡುವಂತೆ‌‌ ಪೋಷಕರು‌ ಒತ್ತಾಯಿಸಿದ್ದಾರೆ. ಕೋಲಾರ ತಾಲೂಕಿನ ನರಸಾಪುರ ಗ್ರಾಮದ ಪಬ್ಲಿಕ್ ‌ಶಾಲೆಯ‌ ಶಿಕ್ಷಕ ಪ್ರಕಾಶ್, ವಿದ್ಯಾರ್ಥಿನಿಗಳ ಜೊತೆ ಅನುಚಿತ ವರ್ತನೆ ಮಾಡಿ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಹನಿಮೂನ್ ಹೇಗಿರುತ್ತೆ ಎಂದು ಪ್ರಶ್ನೆ ಮಾಡುವುದು, ವಿದ್ಯಾರ್ಥಿನಿಯರು ಮೈ ಮುಟ್ಟಿ ಮಾತನಾಡುವುದರ ಜೊತೆಗೆ ಅಶ್ಲೀಲವಾಗಿ ವರ್ತನೆ ಮಾಡುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಕನ್ನಡ ಶಿಕ್ಷಕ ಪ್ರಕಾಶ್ ವಿರುದ್ದ ಹಲವಾರು ದೂರುಗಳಿವೆ ಅವರನ್ನು ಕೂಡಲೇ ಅಮಾನತು ಮಾಡಬೇಕೆಂದು ಪೋಷಕರು ಒತ್ತಾಯಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಕಣ್ಣಯ್ಯ ಭೇಟಿ ನೀಡಿ‌ ಶಿಕ್ಷಕರನ್ನು ವಿಚಾರಣೆ ನಡೆಸಿದರು. ಈ ಹಿಂದೆ ಕೆಲಸ ಮಾಡಿದ ಶಾಲೆಯಲ್ಲೂ ವಿಧ್ಯಾರ್ಥಿನಿಯರ ಜೊತೆಗೆ ಅನುಚಿತ ವರ್ತನೆ ಮಾಡಿ ಶಿಕ್ಷಕ‌ ಪ್ರಕಾಶ್ ಅಮಾನತುಗೊಂಡಿದ್ದರು.
ಶಿಕ್ಷಕ ಪ್ರಕಾಶ್ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತಪಡಿಸಿದ ಪೋಷಕರು ಮತ್ತು ಸಾರ್ವಜನಿಕರು ಕೂಡಲೇ ಸೇವೆಯಿಂದ ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + two =
Remember me
