ಮೈಸೂರು:ಇಲ್ಲೊಬ್ಬ ಶಿಕ್ಷಕ ಕ್ಷುಲಕ ಕಾರಣಕ್ಕೆ ಸ್ಟೀಲ್ ಸ್ಕೇಲ್ ನಿಂದ ವಿದ್ಯಾರ್ಥಿಗೆ ಥಳಿಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಎಚ್​.ಡಿ ಕೋಟೆ ನಗರದಲ್ಲಿ ನಡೆದಿದೆ.
ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಶಾಂತಿಪುರ ಗ್ರಾಮದ ಖಾಸಗಿ ಶಾಲೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ. 8ನೇ ತರಗತಿಯ ಅಮೃತ್ ಬಿಡುವಿನ ವೇಳೆಯಲ್ಲಿ ಶಾಲಾ ಕೊಠಡಿಯಲ್ಲಿ ಸೀಮೆಸುಣ್ಣ ಮುರಿದು ಆಟವಾಡುತ್ತಿದ್ದ. ಇದರಿಂದ ಸಿಟ್ಟಿಗೆದ್ದ ಶಿಕ್ಷಕ ಸಿದ್ದರಾಜು ಸ್ಟೀಲ್ ಸ್ಕೇಲ್​ನಿಂದ ಥಳಿಸಿದ್ದಾರೆ.
ಇದರಿಂದಾಗಿ ಅಮೃತ್​ ಗಂಭೀರವಾಗಿ ಗಾಯಗೊಂಡಿದ್ದಾನೆ. ಆದರೆ ಶಿಕ್ಷಕ ಸಿದ್ದರಾಜು ಪೋಷಕರಿಗೆ ಕರೆ ಮಾಡಿ ಅಮೃತ್​ ಕಟರ್​ನಿಂದ ಕೈ ಕಟ್ ಮಾಡಿಕೊಂಡಿರುವುದಾಗಿ ಸುಳ್ಳು ಮಾಹಿತಿ ನೀಡಿದ್ದಾರೆ.
ಸದ್ಯ ಗಾಯಾಳು ಅಮೃತ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನ ನಡೆದ ನಂತರ ಶಾಲೆಗೆ ತಾಲೂಕು ಶಿಕ್ಷಣಾಧಿಕಾರಿ ಉದಯಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈಗ ಎಚ್​.ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
