ಬಳ್ಳಾರಿ:ಶೌಚಗೃಹ ನಿರ್ಮಾಣದ ಹಣಕ್ಕೂ ಕೈ ಚಾಚಿದ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿಯೊಬ್ಬರು ಭ್ರಷ್ಟಾಚಾರ ವಿರೋಧಿ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಬಳ್ಳಾರಿಯ ರೇಡಿಯೋ ಪಾರ್ಕ್ ಬಳಿ ಇರುವ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಅಬೀದಾ ಬೇಗಂ ಲಂಚಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದವರು.
ಶಾಲೆಯಲ್ಲಿ ವಿಕಲಚೇತನ ಮಕ್ಕಳಿಗಾಗಿ ಶೌಚಗೃಹ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿರುವ ಕುರಿತು ದೃಢೀಕರಣ ಪತ್ರ ನೀಡಲು ಬಳ್ಳಾರಿಯ ಜಯನಗರ ಬಡಾವಣೆ ನಿವಾಸಿ, ಗುತ್ತಿಗೆದಾರ ಮೊಹಮ್ಮದ್​ ಜುಲ್ಫೀಕರ್​ ಎಂಬುವವರ ಬಳಿ ಅಬೀದಾ ಬೇಗಂ 10 ಸಾವಿರ ರೂ. ಲಂಚ ಕೇಳಿದ್ದರು.
ಈ ಕುರಿತು ಮೊಹಮ್ಮದ್​ ಜುಲ್ಫೀಕರ್​ ಎಸಿಬಿಗೆ ದೂರು ನೀಡಿದ್ದರು. ಬಳಿಕ ಅಬೀದಾಗೆ ಹಣ ನೀಡುವ ಸಂದರ್ಭ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಎಸಿಬಿ ಎಸ್​ಪಿ ಶ್ರೀಹರಿ ಬಾಬು ಮಾರ್ಗದರ್ಶನದಲ್ಲಿ ಡಿವೈಎಸ್​​ಪಿ ಸೂರ್ಯನಾರಾಯಣ ರಾವ್​ ಹಾಗೂ ತಂಡ ದಾಳಿ ನಡೆಸಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
ಆ ಕಾಲೇಜಲ್ಲಿ ಹಿಜಾಬ್​ ತೊಡಲು ಈ ಹಿಂದೆ ಅವಕಾಶ ಇರಲಿಲ್ಲ; ಮಹತ್ವದ ದಾಖಲೆ ಬಹಿರಂಗ

ಹಿಜಾಬ್​-ಕೇಸರಿ ಸಂಘರ್ಷದ ನಡುವೆ ಇದೇನಿದು ಮತ್ತೊಂದು?!

ಹಿಜಾಬ್​ ಸಂಘರ್ಷಕ್ಕೆ ಇಂದು ಕೂಡ ಬೀಳಲಿಲ್ಲ ತೆರೆ, ಹೆಚ್ಚಾಯಿತು ನಾಳೆ ಏನಾಗಬಹುದು ಎಂಬ ಕೌತುಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + nineteen =
Remember me
