ಬೆಂಗಳೂರು:ಕಳೆದ ಬಜೆಟ್ ಅಧಿವೇಶನದಲ್ಲಿ ಅನುಮೋದನೆಗೊಂಡಿರುವ ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆಗೆ ತುರ್ತಾಗಿ ನಿಯಮಗಳನ್ನು ರೂಪಿಸಿ ಪ್ರಸ್ತುತ ಶೈಕ್ಷಣಿಕ ಸಾಲಿನ ವರ್ಗಾವಣಾ ವೇಳಾಪಟ್ಟಿ ಪ್ರಕಟಣೆಗೆ ಪೂರ್ವಭಾವಿ ಕ್ರಮಗಳಿಗೆ ಚಾಲನೆ ನೀಡಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
ಶುಕ್ರವಾರ ತಮ್ಮ ಕಚೇರಿಯಲ್ಲಿ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಸಂಸದೀಯ ವ್ಯವಹಾರಗಳ ಇಲಾಖೆಯ ಕಾನೂನಾತ್ಮಕ ಅಭಿಪ್ರಾಯದೊಂದಿಗೆ ಕೂಡಲೇ ನಿಯಮಗಳನ್ನು ಅಂತಿಮಗೊಳಿಸಿ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಯು-ಟ್ಯೂಬ್ ಚಾನಲ್ನಲ್ಲಿ ಎಸ್‌ಎಸ್ ಎಲ್ಸಿ ಪರೀಕ್ಷೆ ಬರೆಯಲು ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪುನರ್ಮನನ ತರಗತಿಗಳನ್ನು ಬಿತ್ತರಿಸಲು ಕಾರ್ಯೋನ್ಮ್ಮುಖವಾಗುವಂತೆ ಸೂಚಿಸಿದರು.
ಹಲವು ಶಾಲೆಗಳು ಆನ್‌ಲೈನ್ ಮೂಲಕ ತರಗತಿಗಳನ್ನು ನಡೆಸುತ್ತಿರುವ ಕುರಿತಂತೆ ಕೆಲವು ಮಾಧ್ಯಮಗಳು ವರದಿಗಳನ್ನು ನೀಡಿದ್ದು, ಬೇಸಿಗೆ ರಜೆಯ ಅವಧಿಯಲ್ಲಿ ವಿದ್ಯಾರ್ಥಿಗಳ ಆನಂದವನ್ನು ಕಸಿದುಕೊಳ್ಳದಿರುವ ಹಾಗೂ ಪೋಷಕರಿಗೆ ಯಾವುದೇ ಆರ್ಥಿಕ ಹೊರೆಯಾಗದ ರೀತಿಯಲ್ಲಿ ಶಾಲೆಗಳು ಆನ್‌ಲೈನ್ ತರಗತಿಗಳನ್ನು ನಡೆಸಲು ಇಚ್ಛಿಸಿದಲ್ಲಿ ಅನುಮತಿಯನ್ನು ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಬೇಕೆಂದು ನಿರ್ದೇಶನ ನೀಡಿದರು.
ಪ್ರಸ್ತುತ ಸಂದರ್ಭದಲ್ಲಿ ಮುಂದಿನ ಶೈಕ್ಷಣಿಕ ಸಾಲಿನ ಅವಧಿಯ ಪರಿಷ್ಕರಣೆ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಎನ್‌ಸಿಇಆರ್‌ಟಿ ನಿಗದಿಪಡಿಸಿದ ಪಠ್ಯಕ್ರಮದ ಆಶಯಗಳಿಗೆ ಅನುಗುಣವಾಗಿ ಪಠ್ಯಕ್ರಮ ಪರಿಷ್ಕರಣೆಯ ಅವಶ್ಯಕತೆಯನ್ನು ಗ್ರಹಿಸಬೇಕಾಗಿದ್ದು, ಇದಕ್ಕಾಗಿ ತಜ್ಞರೊಂದಿಗೆ ಸಭೆಯನ್ನು ನಡೆಸುವ ಕುರಿತು ಕೂಡಲೇ ಪ್ರಸ್ತಾವನೆ ಮಂಡಿಸಬೇಕೆಂದೂ ಸುರೇಶ್‌ಕುಮಾರ್ ಸೂಚಿಸಿದರು.
ರಾಜ್ಯದಲ್ಲಿ ಕರೊನಾ ಸೋಂಕಿತರ ಪರೀಕ್ಷೆ ಕಾರ್ಯ ವಿಳಂಬ: ಮಾಜಿ ಸಿಎಂ ಸಿದ್ದರಾಮಯ್ಯ ಆಕ್ಷೇಪ

ಕೋವಿಡ್​-19 ಹರಡುವಿಕೆ ತಡೆಯಲು ಪೋಲಿಯೋ ಕಣ್ಗಾವಲು ಸಿಬ್ಬಂದಿ ಬಳಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 4 =
Remember me
