ಬೆಂಗಳೂರು:ರಾಜೀನಾಮೆ ಮತ್ತು ನಿವೃತ್ತಿಯಿಂದ ತೆರವಾಗುತ್ತಿರುವ ವಿಧಾನಪರಿಷತ್ತಿನ ಕೆಲವು ಪದವಿಧರ ಮತ್ತು ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಕೇಂದ್ರ ಚುನಾವಣಾ ಆಯೋಗ ಸೂಚನೆಯಂತೆ ನಡೆಯಲಿದೆ.ಈಶಾನ್ಯ ಪದವಿಧರ ಕ್ಷೇತ್ರದಿಂದ ಡಾ. ಚಂದ್ರಶೇಖರ ಬಿ. ಪಾಟೀಲ್, ಬೆಂಗಳೂರು ಪದವಿಧರ ಕ್ಷೇತ್ರದಿಂದ ಎ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಡಾ. ವೈ.ಎ. ನಾರಾಯಣ ಸ್ವಾಮಿ, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್.ಎಲ್. ಭೋಜೆಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ಅವರು 21-06-2024 ಕ್ಕೆ ನಿವೃತ್ತಿಯಾಗಲಿದ್ದಾರೆ.ನೈಋತ್ಯ ಪದವಿಧರ ಕ್ಷೇತ್ರ ಆಯನೂರು ಮಂಜುನಾಥ್ ರಾಜೀನಾಮೆಯಿಂದ ಏ.19 ರಿಂದ ತೆರವಾಗಿದ್ದು, ಈ ಸ್ಥಾನದ ಅವಧಿ 21-06-2024 ತನಕ, ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಪುಟ್ಟಣ್ಣ ರಾಜೀನಾಮೆಯಿಂದ ಮಾ.16ಕ್ಕೆ ತೆರವಾದ ಸ್ಥಾನದ ಅವಧಿ 11-11-2026 ತನಕ ಇದೆ.ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕ ನೋಟೀಸ್ ಸೆ.30 ಪ್ರಕಟಣೆಯಾಗಲಿದೆ. ಫಾರಂ 18 ಅಥವಾ 19 ರಲ್ಲಿ ಅರ್ಜಿ ಸ್ವೀಕರಿಸಲು ನ.6 ಕಡೆಯ ದಿನವಾಗಿದೆ. ಮತದಾರರ ಕರಡು ಪ್ರತಿ ನ.23 ರಂದು ಪ್ರಕಟವಾಗಲಿದೆ. ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸ್ವೀಕರಿಸಲು ನ.23 ರಿಂದ ಡಿ.9 ವರೆಗೆ ಅವಕಾಶವಿದೆ. ಡಿ.30ಕ್ಕೆ ಮತದಾರರ ಪಟ್ಟಿ ಪ್ರಕಟವಾಗಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 17 =
Remember me
