
ಬೆಂಗಳೂರು:ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದು, ಪದವೀಧರರು, ಶಿಕ್ಷಕರ ಬಗ್ಗೆ ಕಾಳಜಿ ತೋರಿಸುತ್ತಿಲ್ಲ ಎಂದು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವಥ್‌ನಾರಾಯಣ ವಾಗ್ದಾಳಿ ನಡೆಸಿದರು.ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಸರ್ಕಾರ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಹೊಸ ಉದ್ಯೋಗ ಸೃಷ್ಟಿಸಿಲ್ಲ, ಶಿಕ್ಷಕರ, ಶಿಕ್ಷಣದ ವಿರೋಧಿ ಸರ್ಕಾರ ಇದಾಗಿದೆ ಎಂದು ಟೀಕಿಸಿದರು.ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಎನ್‌ಪಿಎಸ್ ರದ್ದು ಮಾಡಿದ್ದಾರೆ. ಖಾಸಗಿ ಶಾಲಾ, ಕಾಲೇಜುಗಳಲ್ಲಿ ಇವರಿಗೆ ಎನ್‌ಪಿಎಸ್ ರದ್ದು ಮಾಡಲು ಧೈರ್ಯ ಇಲ್ಲ. ಸರ್ಕಾರಿ ಶಾಲೆ, ಕಾಲೇಜು ಮಕ್ಕಳು ಎನ್‌ಪಿಎಸ್ ಶಿಕ್ಷಣ ಪದ್ಧತಿಯಿಂದ ವಂಚಿತರಾಗಿದ್ದಾರೆ ಎಂದರು.ಸಿದ್ದರಾಮಯ್ಯ ಮತ್ತು ಅವರ ಸರ್ಕಾರದಲ್ಲಿ ಯಾವ ವ್ಯಕ್ತಿಯೂ ಏನು ಕೆಲಸ ಮಾಡಿದೀವಿ ಅಂತ ಹೇಳಲ್ಲ. ಯಾಕಂದ್ರೆ ಅವರು ಏನೂ ಕೆಲಸ ಮಾಡಿಲ್ಲ. ಬಾಯಿ ಬಿಟ್ಟರೆ ಗ್ಯಾರಂಟಿ ಬಗ್ಗೆ ಮಾತ್ರ ಮಾತಾಡ್ತಾರೆ. ಒಪಿಎಸ್ ಜಾರಿ ಮಾಡಲಿಲ್ಲ, ಏಳನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಿಲ್ಲ ಎಂದು ಹೇಳಿದರು.ಯುಕವರು, ಪದವೀಧರರು ಮತ್ತು ಶಿಕ್ಷಕರ ಪರವಾಗಿ ಬಿಜೆಪಿ ಸದಾ ನಿಂತಿದೆ. ಹಲವಾರು ಸುಧಾರಣೆಗಳನ್ನು ತಂದಿದೆ. ಈ ಬಾರಿ ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.ಬಿಜೆಪಿ- ಜೆಡಿಎಸ್ ಮೈತ್ರಿ ಪಕ್ಷಗಳು ಪದವೀಧರರ ವಿಚಾರ, ಶಿಕ್ಷಕರ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿವೆ. ಹಲವು ಸುಧಾರಣೆ, ಪ್ರಗತಿ, ನೂತನ ಕಾಯ್ದೆ ಕಾನೂನು ಜಾರಿಗೆ ತಂದಿವೆ ಎಂದರು.ಯಡಿಯೂರಪ್ಪ ಅವರ ಅವಧಿಯಲ್ಲಿ ಹುದ್ದೆ ಭರ್ತಿಗೆ ಅವಕಾಶ ಮಾಡಿಕೊಡಲಾಯಿತು. ಅನುದಾನ ಕೊಡುವ ವಿಚಾರದಲ್ಲೂ ಅವಕಾಶ, ಆಜ್ಞೆ ಮಾಡಲಾಗಿದೆ. ಜ್ಞಾನ ಆಯೋಗ ಆರಂಭ, ಮೂರನೇ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ತರುವ ಮೂಲಕ ದೊಡ್ಡ ಸುಧಾರಣೆ ಮಾಡಲಾಗಿದೆ ಎಂದರು. ಕೌಶಲ್ಯಯುಕ್ತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಜೀ ಮಹತ್ವದ ಕ್ರಮ ತೆಗೆದುಕೊಂಡಿದ್ದಾರೆ ಎಂದರು.ಸಿಇಟಿ ಪರೀಕ್ಷೆ ವಿಚಾರ, ಹೊಸದಾಗಿ ಜಾರಿ ಮಾಡಿದ ಪಬ್ಲಿಕ್ ಎಕ್ಸಾಮ್ ವಿಚಾರದಲ್ಲಿ ಗೊಂದಲ, ಸಮಸ್ಯೆಗಳು ಕಾಡುವಂತಾಗಿದೆ. ಶಿಕ್ಷಣ ವಾತಾವರಣವನ್ನು ಹದಗೆಡಿಸಿದ್ದಾರೆ. ಯುವ ನೀತಿಯಲ್ಲೂ ಡೋಂಗಿ ನೀತಿ ಜಾರಿ ಮಾಡಿದ್ದಾರೆ ಎಂದು ತಿಳಿಸಿದರು.ನಮ್ಮ ಸರಕಾರ ಪಾಲಿಟೆಕ್ನಿಕ್, ಐಟಿಐ ಗುಣಮಟ್ಟ ಹೆಚ್ಚಿಸಿ ಅಡ್ಮಿಶನ್ ಶೇ.100ಕ್ಕೆ ಹೆಚ್ಚಳವಾಗಿದೆ. ಇಲ್ಲಿ ಕಲಿತ ಎಲ್ಲರಿಗೂ ಉದ್ಯೋಗ ಸಿಗುತ್ತಿದೆ. ಎಲ್ಲ ಸರಕಾರಿ ಕಾಲೇಜುಗಳಲ್ಲಿ ಶೇ.87ರಷ್ಟು ಅಕ್ರೆಡಿಷನ್ ಕೊಡಿಸಿದ್ದೇವೆ. ಇದೊಂದು ದೊಡ್ಡ ಸಾಧನೆ. ಶಿಕ್ಷಕರ ನೇಮಕಾತಿ ವೇಳೆ ಪಾರದರ್ಶಕ ಕೌನ್ಸೆಲಿಂಗ್ ನಡೆಸಿದ್ದೇವೆ ಎಂದರು.ಬಡ್ತಿ ಕಾಣದ ಶಿಕ್ಷಕರಿಗೆ ಬಡ್ತಿ ಕೊಡಿಸಿದ್ದೇವೆ. ಸುಧಾರಣೆ ನಡೆಸಿದ್ದು, ನೇಮಕಾತಿ, ಪಾರದರ್ಶಕತೆ, ಕೆರಿಯರ್ ಪ್ರಮೋಷನ್ ನೀಡಿದ್ದೇವೆ. ನಮ್ಮ ಅವಧಿಯಲ್ಲಿ 25ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದ್ದೇವೆ ಎಂದರು.
ಸಿಎಂ ನೇರ ಕಾರಣ:ವಾಲ್ಮಿಕಿ ನಿಗಮದ ಅಧಿಕಾರಿ ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದರ ಹಿಂದೆ ಸರ್ಕಾರ ಮತ್ತು ಸಿಎಂ ಕಾರಣರಾಗಿದ್ದಾರೆ ಎಂದು ಡಾ.ಅಶ್ವತ್ಥನಾರಾಯಣ್ ಹೇಳಿದರು.ನಮ್ಮ ಪಕ್ಷದ ರಾಜ್ಯ ಅಧ್ಯಕ್ಷರು ಮೃತಪಟ್ಟ ಚಂದ್ರಶೇಖರ್ ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳಲಿದ್ದಾರೆ ಎಂದರು.ಒಂದು ಖಾತೆಯನ್ನು ಓಪನ್ ಮಾಡಲು ಊಈಯಿಂದ ಪರ್ಮಿಷನ್ ಬೇಕು. ಆದರೆ ಹೇಗೆ ಖಾತೆ ಓಪನ್ ಮಾಡಿದ್ದಾರೆ ಅಂತ ಸಿದ್ದರಾಮಯ್ಯ ಹೇಳಬೇಕು ಎಂದರು.ಸುರ್ಜೆವಾಲಾ ಎಲ್ಲಿದಾರೆ ಈಗ? ಯಾಕೆ ಮಾತಾಡ್ತಿಲ್ಲ? ಎ್ಐಆರ್ ಫೈಲ್ ಮಾಡದೇ ಸಿಐಡಿಗೆ ಕೊಟ್ರೆ ಎನು ಲಾಭ? ಈ ವಿಚಾರದಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
