|ಎನ್.ಎಲ್. ಶಿವಮಾದುಬೆಂಗಳೂರು
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಡಿಸೆಂಬರ್ ಮೊದಲ ವಾರದಲ್ಲಿ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಈಗಾಗಲೇ ಅಧಿವೇಶನದಲ್ಲಿ ಅನುಮೋದನೆ ಪಡೆದುಕೊಂಡಿರುವ ಶಿಕ್ಷಕರ ವರ್ಗಾವಣೆ ತಿದ್ದುಪಡಿ ಕಾಯ್ದೆ ಅನ್ವಯವೇ ಪ್ರಕ್ರಿಯೆ ನಡೆಯಲಿದ್ದು, ಅದಕ್ಕೆ ಬೇಕಾದ ನಿಯಮ ರೂಪಿಸುವ ಕೆಲಸವೂ ಮುಕ್ತಾಯದ ಹಂತದಲ್ಲಿದೆ. ನಿಯಮ ಪ್ರಕಟಗೊಂಡ ನಂತರ ಸ್ಪಷ್ಟತೆ ದೊರೆಯಲಿದೆ.
ಪ್ರಸಕ್ತ ಶೈಕ್ಷಣಿಕ ವರ್ಷ ಕೊನೆಯಾಗುವುದರೊಳಗೆ ವಿಧಾನಸಭಾ ಚುನಾವಣೆ ನಡೆಯಲಿದೆ. ಆದಕ್ಕೂ ಮೊದಲು ಮಾರ್ಚ್ ಮೊದಲ ವಾರದಿಂದ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ಶಿಕ್ಷಕರನ್ನು ಚುನಾವಣಾ ಕಾರ್ಯಗಳಿಗೆ ನೇಮಿಸುವ ಕಾರಣ ಹಾಗೂ ಎಸ್​ಎಸ್​ಎಲ್​ಸಿ ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಿರುವುದರಿಂದ ಮುಂದಿನ ಬೇಸಿಗೆ ರಜೆಯಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಲು ಸಾಧ್ಯವಾಗುವುದಿಲ್ಲ. ಫೆಬ್ರವರಿಯಲ್ಲಿ ಪರೀಕ್ಷೆಗಳು ಆರಂಭಗೊಳ್ಳುವುದರಿಂದ ಆಗಲೂ ವರ್ಗಾವಣೆ ಕಷ್ಟವಾಗಲಿದೆ. ಹಾಗಾಗಿ ಹೊಸ ವರ್ಷಕ್ಕೆ ಮುನ್ನವೇ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಶಿಕ್ಷಣ ಇಲಾಖೆ ಉದ್ದೇಶಿಸಿದೆ. ವರ್ಗಾವಣೆ ತಿದ್ದುಪಡಿ ಕಾಯ್ದೆಗೆ ರಾಜ್ಯಪಾಲರ ಅಂಕಿತವಾಗಿದೆ. ನವೆಂಬರ್ 2ನೇ ವಾರದಲ್ಲಿ ನಿಯಮಗಳು ರೂಪುಗೊಳ್ಳಲಿವೆ. 15 ದಿನ ಆಕ್ಷೇಪಣೆಗೆ ಅವಕಾಶ ಇರಲಿದೆ.
3 ವರ್ಷಕ್ಕೊಮ್ಮೆ ಅರ್ಜಿ ಸಲ್ಲಿಕೆಗೆ ಅವಕಾಶ:ಈವರೆಗೆ ಶಿಕ್ಷಕರು ಒಂದು ಬಾರಿ ಮಾತ್ರ ವರ್ಗಾವಣೆಗೆ ಅರ್ಜಿ ಸಲ್ಲಿಸಬಹುದಿತ್ತು. ಆದರೆ, ನಿಯಮಗಳಿಗೆ ತಿದ್ದುಪಡಿ ತಂದು ಸೇವೆಗೆ ಸೇರಿದ ಮೊದಲ 5 ವರ್ಷ ಮತ್ತು ನಿವೃತ್ತಿ ಹೊಂದಲು 5 ವರ್ಷ ಉಳಿದಿರುವ ಸಂದರ್ಭ ಹೊರತುಪಡಿಸಿ, ಉಳಿದ ಅವಧಿಯಲ್ಲಿ ಪ್ರತಿ ಮೂರು ವರ್ಷಗಳಿಗೊಮ್ಮೆ ಎಷ್ಟು ಬಾರಿ ಬೇಕಾದರೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅಡೆತಡೆ ಇಲ್ಲದೆ ಪ್ರಕ್ರಿಯೆ:ಸಾಮಾನ್ಯವಾಗಿ ಶಿಕ್ಷಕರ ವರ್ಗಾವಣೆ ನಡೆಯುವ ಸಮಯದಲ್ಲಿ ಹತ್ತಾರು ಕಾರಣ ನೀಡಿ ಪ್ರಕ್ರಿಯೆಗಳಿಗೆ ತಡೆ ತರಲಾಗುತ್ತದೆ. ಈ ಬಾರಿ ಅಂಥ ತೊಡಕು ಉಂಟಾಗದಂತೆ ಎಚ್ಚರಿಕೆ ವಹಿಸಿ ನಿಯಮ ರೂಪಿಸಲಾಗುತ್ತಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.
ಶಿಕ್ಷಕರ ವರ್ಗಾವಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮುಂದಿನ ತಿಂಗಳು ಸಾಮಾನ್ಯ ವರ್ಗಾವಣೆ ಆರಂಭಿಸುವ ಸಾಧ್ಯತೆ ಇದೆ.
|ಡಾ.ಆರ್. ವಿಶಾಲ್ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 11 =
Remember me
