ಬೆಳಗಾವಿ:ಖಾನಾಪುರ ತಾಲೂಕಿನ ನಂದಗಡ ಪೊಲೀಸ್​ ಠಾಣೆ ವ್ಯಾಪ್ತಿಯ ಗ್ರಾಮವೊಂದರ ಪ್ರೌಢಶಾಲೆಯ ಶಿಕ್ಷಕರೊಬ್ಬರು 9ನೇ ತರಗತಿ ವಿದ್ಯಾರ್ಥಿನಿಯನ್ನ ಪ್ರೀತಿ-ಪ್ರೇಮದ ಬಲೆಗೆ ಬೀಳಿಸಿಕೊಂಡು ಖಾಸಗಿಯಾಗಿ ಕಾಲ ಕಳೆದಿದ್ದು, ಇಬ್ಬರೂ ಒಟ್ಟಿಗಿರುವ ಖಾಸಗಿ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ.
ಖಾಸಗಿ ಪ್ರೌಢಶಾಲೆಯ ಶಿಕ್ಷಕ ಅದೇ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿದ್ದ. ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಪ್ರೀತಿಯಲ್ಲಿ ಬೀಳಿಸಿಕೊಂಡಿದ್ದ. ಕೆಲವು ತಿಂಗಳಿಂದ ಶಾಲಾ ಸಮಯದ ಬಳಿಕವೂ ವಿದ್ಯಾರ್ಥಿನಿಯನ್ನು ಶಾಲೆಯಲ್ಲೇ ಇರಿಸಿಕೊಳ್ಳುತ್ತಿದ್ದ.
ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿನಿಯನ್ನು ತನ್ನೊಂದಿಗೆ ಬೇರೆ ಕಡೆಗೆ ಕರೆದುಕೊಂಡು ಹೋಗಿದ್ದ. ಆ ವೇಳೆ ಇಬ್ಬರೂ ಏಕಾಂತದಲ್ಲಿದ್ದ ಕ್ಷಣಗಳನ್ನು ತನ್ನ ಮೊಬೈಲ್​ನಲ್ಲಿ ವಿಡಿಯೋ ಚಿತ್ರೀಕರಿಸಿಕೊಂಡಿದ್ದ. ಈ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ.
ವಾರದ ಹಿಂದೆಯೇ ಶಾಲಾ ಆಡಳಿತ ಮಂಡಳಿಗೆ ಈ ಪ್ರಕರಣ ಗೊತ್ತಾಗಿತ್ತು. ಆಡಳಿತ ಮಂಡಳಿ ಶಿಕ್ಷಕನನ್ನು ಕೆಲಸದಿಂದ ಅಮಾನತು ಮಾಡಿದೆ. ವಿಡಿಯೋಗಳು ಎಲ್ಲೆಡೆ ಹರಿದಾಡಿದ್ದರಿಂದ ವಿದ್ಯಾರ್ಥಿನಿ ನೊಂದಿದ್ದಾಳೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಇಪ್ಪೀ ನೂಡಲ್ಸ್​​ ತಿನ್ನುವ ಆಸೆಯಲ್ಲಿದ್ದ ಬೆಂಗಳೂರಿನ ಮಹಿಳೆಗೆ ಶಾಕ್​! ಮಸಾಲ ಪ್ಯಾಕೇಟ್​ನಲ್ಲಿ ಬಳಸಿದ ಬ್ಯಾಂಡೇಜ್​ ಪತ್ತೆ!

ಮಟಮಟ ಮಧ್ಯಾಹ್ನ ಮಲಗಿದ ಸ್ಥಿತಿಯಲ್ಲೇ ಹೆಣವಾದ ಕೊಪ್ಪಳದ ಪ್ರೇಮಿಗಳು! ಬೆಚ್ಚಿಬಿದ್ದ ಸ್ಥಳೀಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 1 =
Remember me
