ಬೆಂಗಳೂರು:ಅನುದಾನಿತ ಶಾಲಾ ಶಿಕ್ಷಕರು ಸುಮಾರು 140 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಹೀಗಾಗಿ ಬೇಸತ್ತು ವಿಷ ಕುಡಿದ ಶಿಕ್ಷಕರ ಪೈಕಿ ಒಬ್ಬರು ಸಾವಿಗೀಡಾಗಿದ್ದು, ಇನ್ನೊಬ್ಬರು ತೀವ್ರ ಅಸ್ವಸ್ಥಗೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ನಿವೃತ್ತ ಶಿಕ್ಷಕ ಸಿದ್ದಯ್ಯ ಹಿರೇಮಠ (65) ಸಾವಿಗೀಡಾದವರು. ವಿಷ ಕುಡಿದು ತೀವ್ರ ಅಸ್ವಸ್ಥಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಇವರು ಇಂದು ರಾತ್ರಿ ಕೊನೆಯುಸಿರೆಳೆದರು. ನೆಲಮಂಗಲದ ಶಿಕ್ಷಕ ವೆಂಕಟರಾಜು ಪರಿಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಇದನ್ನೂ ಓದಿ:ಪತಿ ಹೃದಯಾಘಾತಕ್ಕೆ ಬಲಿ; ಒಂದೇ ಉರುಳಿಗೆ ಮಗನೊಂದಿಗೆ ಕೊರಳೊಡ್ಡಿ ಪ್ರಾಣ ಬಿಟ್ಟ ಪತ್ನಿ
ಅನುದಾನಿತ ಶಾಲಾ ಶಿಕ್ಷಕರು ಪಿಂಚಣಿಗಾಗಿ ಕಳೆದ 141 ದಿನಗಳಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ ಎನ್ನಲಾಗಿದೆ. ಇದರಿಂದ ಬೇಸತ್ತ ಶಿಕ್ಷಕರಿಬ್ಬರು ನಿನ್ನೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ತೀವ್ರ ಅಸ್ವಸ್ಥಗೊಂಡ ಸಿದ್ದಯ್ಯ ಹಿರೇಮಠ ಹಾಗೂ ವೆಂಕಟರಾಜುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ:ಆಸ್ತಿ ಆಸೆಗೆ ಒಂದೇ ಮನೆಯ ನಾಲ್ವರ ಕೊಲೆ; ಮಕ್ಕಳಿಬ್ಬರ ಪ್ರಾಣ ಉಳಿಸಿತೇ ನಿದ್ರೆ-ಆಟ!?

ಎಸ್​​ಎಸ್​ಎಲ್​ಸಿ ಪರೀಕ್ಷಾರ್ಥಿಗಳಿಗಾಗಿ ರೇಡಿಯೋ ‘ಬಾನ್‌ದನಿ’ ಪ್ರಸಾರ; ಎಂದಿನಿಂದ ಎಲ್ಲಿಯವರೆಗೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − six =
Remember me
