ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8ನೇ ತರಗತಿ) ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇನ್ನೊಂದು ವಾರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.
ಇಲಾಖೆ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲವು ವಿವಾಹಿತ ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಭ್ಯರ್ಥಿಗಳ ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್, ವಿವಾಹಿತ ಮಹಿಳೆಯರು ಸಲ್ಲಿಸಿರುವ ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಪರಿಗಣಿಸಿ ನೇಮಕಾತಿ ಪ್ರಕ್ರಿಯೆ ಮುಂದುವರಿಸುವಂತೆ ಆದೇಶದಲ್ಲಿ ತಿಳಿಸಿತ್ತು.
ಈ ಕುರಿತು ಮುಖ್ಯ ಕಾರ್ಯದರ್ಶಿಯವರು, ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ತಾತ್ಕಾಲಿಕ ಆಯ್ಕೆ ಪಟ್ಟಿ ಪರಿಷ್ಕರಿಸಲು ತೀರ್ಮಾನಿಸಲಾಗಿತ್ತು. ಮುಂದಿನ ಶೈಕ್ಷಣಿಕ ವರ್ಷದ ಆರಂಭದ ವೇಳೆಗೆ ಹೊಸ ಶಿಕ್ಷಕರ ಸೇವೆ ಪಡೆದುಕೊಳ್ಳಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 2 =
Remember me
