ಬೆಂಗಳೂರು:ಶಿಕ್ಷಕರು ಮತ್ತು ಉಪನ್ಯಾಸಕರ ವರ್ಗಾವಣೆ ವಿಳಂಬವಾಗಿದ್ದು, ಆ ಪ್ರಕ್ರಿಯೆಯನ್ನು ತಡಮಾಡದೇ ಶುರುಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನಕಾರ್ಯದರ್ಶಿಗೆ ಆದೇಶಿಸಿದ್ದರು. ಇದರ ಬೆನ್ನಿಗೇ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಫೇಸ್​ಬುಕ್​/ ಟ್ವಿಟರ್​ ಖಾತೆಯಲ್ಲಿ ಈ ಸಂಬಂಧ ಅಪ್ಡೇಟ್ ನೀಡಿದ್ದಾರೆ.
ಇದರಂತೆ, ನವೆಂಬರ್‌ ಐದರಿಂದ ಶಿಕ್ಷಕರ‌ ವರ್ಗಾವಣಾ ಪ್ರಕ್ತಿಯೆ ಪ್ರಾರಂಭವಾಗಲಿದೆ‌. ಈಗಾಗಲೇ ಭರವಸೆ ನೀಡಿರುವಂತೆ ಕಳೆದ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣಾ ಶಿಕ್ಷೆಗೆ ಒಳಗಾದ ಶಿಕ್ಷಕರಿಗೆ ಮೊದಲು ಆದ್ಯತೆ ಸಿಗಲಿದ್ದು, ಈ ನಿಟ್ಟಿನಲ್ಲಿ ಕೂಡಲೇ ಅಧಿಸೂಚನೆ ಹಾಗೂ ವೇಳಾಪಟ್ಟಿಯನ್ನು ಹೊರಡಿಸಲು ಸಾರ್ವಜನಿಕ‌ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಸಚಿವ ಸುರೇಶ್​ ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ:ಶಿಕ್ಷಣ ವ್ಯಾಪಾರವೇ- ಶಿಕ್ಷಣ ಸಂಸ್ಥೆಗಳು ವ್ಯಾಪಾರಿ ಸಂಸ್ಥೆಗಳೇ?: ಪರಿಶೀಲಿಸಲಿದೆ ಸುಪ್ರೀಂ ಕೋರ್ಟ್​
ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ವೇಳಾಪಟ್ಟಿಯನ್ನು ಇಲಾಖೆ ನಾಳೆ ಪ್ರಕಟಿಸಲಿದೆ ಎಂದು ಸಚಿವರು ತಿಳಿಸಿದ್ದಾರೆ. ಇದರೊಂದಿಗೆ ಬಹುಕಾಲ ವಿಳಂಬವಾಗಿದ್ದ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ಸಿಕ್ಕಂತಾಗಿದೆ.
https://twitter.com/nimmasuresh/status/1318904240664870912?s=20
ವಾರದೊಳಗೆ ಶಿಕ್ಷಕರ, ಉಪನ್ಯಾಸಕರ ವರ್ಗಾವಣೆ ಕೂಡಲೇ ಆರಂಭಿಸುವಂತೆ ಸಿಎಂ ತಾಕೀತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
