ಬೆಂಗಳೂರು:ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದದ್ದು. ಬದುಕಿನಲ್ಲಿ ನಮಗೆ ಮಾರ್ಗದರ್ಶನ ಮಾಡಿದ ಶಿಕ್ಷಕರ ಸೇವೆ ಸ್ಮರಣೀಯವಾದದ್ದು ಎಂದು ನ್ಯಾಷನಲ್​ ಎಜುಕೇಶನ್​ ಸೊಸೈಟಿ (ಎನ್​ಇಎಸ್​) ಅಧ್ಯಕ್ಷ ಡಾ. ಎಚ್​. ಎನ್​. ಸುಬ್ರಹ್ಮಣ್ಯ ಹೇಳಿದ್ದಾರೆ.
ರಾಷ್ಟ್ರೀಯ ಶಿಕ್ಷಕ ದಿನದ ನಿಮಿತ್ತ ಬಸವನಗುಡಿಯ ನ್ಯಾಷನಲ್​ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ. ಒಮ್ಮೆ ಶಿಕ್ಷಕರಾದವರು ಜೀವನ ಪರ್ಯಂತ ಶಿಕ್ಷಕರಾಗಿರುತ್ತಾರೆ. ಸಮಾಜಕ್ಕೆ ಮಾರ್ಗದರ್ಶಕರು ಆಗಿರುತ್ತಾರೆ ಎಂದು ಬಣ್ಣಿಸಿದರು.
ಎನ್​ಇಎಸ್​ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ವಿ.ವೆಂಕಟಶಿವಾರೆಡ್ಡಿ ಮಾತನಾಡಿ, ಅತ್ಯುತ್ತಮ ಶಿಕ್ಷಕರ ಅನನ್ಯ ಕೊಡುಗೆ ಸ್ಮರಿಸುವುದು ನಮ್ಮ ಜವಾಬ್ದಾರಿಯಾಗಿದೆ. ಶಿಕ್ಷಣ ಗುಣಮಟ್ಟವನ್ನು ಸುಧಾರಿಸುವ ಮಾತ್ರವಲ್ಲದೆ ವಿದ್ಯಾರ್ಥಿಗಳ ಜೀವನವನ್ನು ಶ್ರೀಮಂತಗೊಳಿಸಿದವರನ್ನು ನಾವೆಲ್ಲರೂ ಸಂಸ್ಮರಣೆ ಮಾಡಬೇಕು ಎಂದರು.
ನಿವೃತ್ತ ಬೋಧಕರಾದ ಅನಂತ ರಂಗನ್​, ಡಾ. ಶೈರೀನ್​ ನೇದುಂಗಡಿ, ಅರುಣಾಚಲಂ, ಡಾ.ಎಚ್​. ಜಿ.ಗೋಕುಲ್​, ಸೋನಾರ್​ ಮಾರುತಿ, ಜಯರಾಮಪ್ಪ, ಡಿ.ವಿ.ನಾಗೇಶ್​, ಎಸ್​.ಆರ್​. ಪಂಕಜಾ, ಎ.ಜಿ.ನಾಗರಾಜಯ್ಯ ಅವರನ್ನು ಸನ್ಮಾನಿಸಲಾಯಿತು.ಎನ್​ಇಎಸ್​ ಶಿಕ್ಷಣ ಸಂಸ್ಥೆಯ ಖಜಾಂಚಿ ವಿ.ಮಂಜುನಾಥ್​ ಸೇರಿ ಮತ್ತಿತರರಿದ್ದರು.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:2 + 15 =
Remember me
