ಬೆಳ್ತಂಗಡಿ:ಕೋವಿಡ್ ಸಂಘರ್ಷದಿಂದ ಮಕ್ಕಳು ತಂತ್ರಜ್ಞಾನದ ಶಿಕ್ಷಣಕ್ಕೆ ಒಗ್ಗಿಕೊಳ್ಳಬೇಕಾದ ಪರಿಸ್ಥಿತಿ ಇಂದಿನದು. ಈ ಸಮಯದಲ್ಲಿ ಅಂತರ್ಜಾಲ ಶಿಕ್ಷಣ ಪಡೆಯುವಲ್ಲಿ ಗ್ರಾಮೀಣ ಮಕ್ಕಳು ವಂಚಿತರಾಗುತ್ತಿದ್ದಾರೆ. ಇದನ್ನರಿತು ಶ್ರೀಕ್ಷೇತ್ರವು 10 ಸಾವಿರ ಲ್ಯಾಪ್​ಟಾಪ್, 20 ಸಾವಿರ ಟ್ಯಾಬ್ ವಿತರಣೆಗೆ ಮುಂದಾಗಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಧರ್ಮಸ್ಥಳ ಪ್ರವಚನ ಮಂಟಪದಲ್ಲಿ ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಲ್ಯಾಪ್​ಟಾಪ್ ಹಾಗೂ ಟ್ಯಾಬ್ ವಿತರಣೆಯ ‘ಜ್ಞಾನತಾಣ’ ಕಾರ್ಯಕ್ರಮದಲ್ಲಿ ಮಾತನಾಡಿದರು. ಜೀವನ ಅಮೂಲ್ಯವಾದುದು. ರೋಗಕ್ಕೆ ಹೆದರಿ ಮನೆಯಲ್ಲೇ ಕುಳಿತುಕೊಳ್ಳುವ ಬದಲಾಗಿ ನಮ್ಮ ಸೃಜನಶೀಲ ಉಪಕ್ರಮಗಳನ್ನು ಅನುಷ್ಠಾನಕ್ಕೆ ತಂದು ಪ್ರಯೋಗಶೀಲರಾಗಿ ಎಂದರು.
10 ಸಾವಿರ ಲ್ಯಾಪ್​ಟಾಪ್ 20 ಸಾವಿರ ಟ್ಯಾಬ್ ವಿತರಣೆ: ರಾಜ್ಯದ ಸುಮಾರು ಒಂದು ಲಕ್ಷ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಅಂತರ್ಜಾಲ ಶಿಕ್ಷಣವನ್ನು ಪ್ರಸಕ್ತ ವರ್ಷ ಒದಗಿಸಲಾಗುತ್ತಿದೆ. 5ನೇ ತರಗತಿಯಿಂದ 10ನೇ ತರಗತಿವರೆಗೆ ಆರು ವರ್ಷಗಳ ಪಠ್ಯಗಳನ್ನು ಕನ್ನಡ ಮಾಧ್ಯಮದಲ್ಲಿ ತಯಾರಿಸಲಾಗಿದ್ದು, ಇದನ್ನು ಟ್ಯಾಬ್​ನಲ್ಲಿ ಇಂಟರ್ನೆಟ್ ರಹಿತವಾಗಿ ಗ್ರಾಮೀಣ ವಿದ್ಯಾರ್ಥಿಗಳು ಬಳಸಬಹುದಾಗಿದೆ. ಕಾಲೇಜು ವಿದ್ಯಾರ್ಥಿಗಳಿಗೆ ಅಂತರ್ಜಾಲ ಶಿಕ್ಷಣಕ್ಕೆ ಲ್ಯಾಪ್​ಟಾಪ್​ಗಳನ್ನು ವಿತರಿಸಲಾಗುತ್ತದೆ. ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ 21 ಕೋಟಿ ರೂ. ವೆಚ್ಚದಲ್ಲಿ ಪ್ರಥಮ ವರ್ಷ 20,000 ಟ್ಯಾಬ್​ಗಳು ಹಾಗೂ 10,000 ಲ್ಯಾಪ್​ಟಾಪ್​ಗಳನ್ನು ಮತ್ತು 450 ಗೌರವ ಶಿಕ್ಷಕರನ್ನು ಒದಗಿಸಲಾಗುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
