ಬೆಂಗಳೂರು:ಇಂದು ಬೆಳಗ್ಗೆ (ಫೆ.20) ನಮ್ಮ ಮೆಟ್ರೋದ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಯಿತು. ತಾಂತ್ರಿಕ ಕಾರಣದಿಂದ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಿತ್ತು. ರೈಲುಗಳ ಸಂಚಾರ ನಿಂತಿದ್ದರಿಂದ ಮೆಟ್ರೋ ನಿಲ್ದಾಣಗಳಲ್ಲಿ ಭಾರೀ ಜನದಟ್ಟಣೆ ಉಂಟಾಗಿತ್ತು. ಕಚೇರಿಗಳಿಗೆ ತೆರಳುವವರಿಗೆ ಸಮಸ್ಯೆಯಾಗಿದ್ದು, ಶಾಲಾ – ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ರೈಲು ಸಂಚಾರ ಇಲ್ಲದೇ ಪರದಾಡುತ್ತಿದ್ದರು.
ಆದರೆ ಇದೀಗ ನೇರಳೆ ಮಾರ್ಗದಲ್ಲಿ ಉಂಟಾಗಿದ್ದ ತಾಂತ್ರಿಕ ದೋಷ ಸರಿಪಡಿಸಲಾಗಿದೆ ಎಂದು ನಮ್ಮ ಮೆಟ್ರೋ ಹೇಳಿದೆ.

ಈ ಬಗ್ಗೆ ಎಕ್ಸ್‌ನಲ್ಲಿ, “ನೇರಳೆ ಮಾರ್ಗದಲ್ಲಿ ತಾಂತ್ರಿಕ ಅಡಚಣೆಯನ್ನು ಬೆಳಗ್ಗೆ 9.20ಕ್ಕೆ ಸರಿಪಡಿಸಲಾಗಿದ್ದು, ರೈಲುಗಳು ವೇಳಾಪಟ್ಟಿಯ ವೇಗದಲ್ಲಿ ಚಲಿಸುತ್ತಿವೆ. ಕ್ಯಾಸ್ಕೆಡಿಂಗ್ ಪರಿಣಾಮಗಳನ್ನು ಸಾಮಾನ್ಯಗೊಳಿಸಲು ಮತ್ತು ವೇಳಾಪಟ್ಟಿಯ ಪ್ರಕಾರ ರೈಲು ಚಲಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ” ಎಂದು ನಮ್ಮ ಮೆಟ್ರೊ ಪೋಸ್ಟ್ ಹಂಚಿಕೊಂಡಿದೆ.
ಸುಮಾರು 45 ನಿಮಿಷಗಳ ಕಾಲ ಯಾವುದೇ ಮೆಟ್ರೋ ರೈಲುಗಳು ನೇರಳೆ ಮಾರ್ಗದಲ್ಲಿ ಸಂಚರಿಸುತ್ತಿರಲಿಲ್ಲ. ಪ್ರಯಾಣಿಕರು ನಿಲ್ದಾಣಗಳಲ್ಲಿಯೇ ಕಾಯುತ್ತಿದ್ದರು. ಎಲ್ಲ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಿತ್ತು. ತಾಂತ್ರಿಕ ಸಮಸ್ಯೆಗೂ ಮುನ್ನ ಹಲವು ನಿಲ್ದಾಣಗಳಲ್ಲಿ ಮೆಟ್ರೋ ಹತ್ತಿದ್ದ ಪ್ರಯಾಣಿಕರನ್ನು ಇಳಿಯುವಂತೆ ಮನವಿ ಮಾಡಿದ್ದು, ಅವಸರವಿದ್ದರೆ ಪರ್ಯಾಯ ಸಾರಿಗೆಯನ್ನು ಬಳಸುವಂತೆ ನಿಲ್ದಾಣಗಳಲ್ಲಿ ಬಿಎಂಆರ್‌ಸಿಎಲ್‌ ಘೋಷಣೆ ಮಾಡಿತ್ತು.
ನಮ್ಮ ಮೆಟ್ರೋದಲ್ಲಿ ಇತ್ತೀಚೆಗೆ ತಾಂತ್ರಿಕ ಸಮಸ್ಯೆಗಳು ಹೆಚ್ಚಿಗೆ ಕಂಡುಬರುತ್ತಿದ್ದು, ಪ್ರಯಾಣಿಕರು ಸಮಸ್ಯೆ ಅನುಭವಿಸುತ್ತಿದ್ದಾರೆ. ಅದರಲ್ಲೂ ನೇರಳೆ ಮಾರ್ಗದಲ್ಲಿ ಹೆಚ್ಚಿನ ಜನ ಸಂದಣಿ ಇರುವುದರಿಂದ ಮೆಟ್ರೋ ರೈಲು ಸಂಚಾರ ನಿಂತರೆ ಬಹಳಷ್ಟು ಜನಕ್ಕೆ ಸಮಸ್ಯೆಯಾಗುತ್ತದೆ.
The technical snag on the purple line is set right at 9.20 am and trains are moving at the schedules speeds . It takes some more time to normalise the cascading effects and to run as per schedule . Inconvenience caused is regretted.— ನಮ್ಮ ಮೆಟ್ರೋ (@OfficialBMRCL)February 20, 2024
The technical snag on the purple line is set right at 9.20 am and trains are moving at the schedules speeds . It takes some more time to normalise the cascading effects and to run as per schedule . Inconvenience caused is regretted.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:19 + ten =
Remember me
