ಬೆಂಗಳೂರು:ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತ್ವರಿಗತಿಯಲ್ಲಿ ಹಣ ಸಂದಾಯ ಮಾಡಬೇಕು, ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತೆ ಕಾರ್ಯಪ್ರವೃತ್ತರಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ವಿಧಾನಸೌಧದ ತಮ್ಮ ಕಚೇರಿಯಲ್ಲಿ ಗುರುವಾರ ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ತಾಕೀತು ಮಾಡಿದರು.ಇಲಾಖೆಯ ಉಪ ನಿರ್ದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇ-ಗವರ್ನೆನ್ಸ್ ಇಲಾಖೆಯ ಸಹಕಾರದೊಂದಿಗೆ ಆಗಿರುವ ಕೆಲವೊಂದು ತಾಂತ್ರಿಕ ನೂನ್ಯತೆಗಳನ್ನು ಪರಿಪಡಿಸಬೇಕು ಎಂದು ಸೂಚನೆ ನೀಡಿದರು.ಅಂಗನವಾಡಿ ಕಾರ್ಯಕರ್ತೆಯರ ಸಹಕಾರದೊಂದಿಗೆ ಮನೆ ಮನೆಗೆ ತೆರಳಿ ನೋಂದಣಿಯಲ್ಲಿ ಆಗಿರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕೆಂದು ನಿರ್ದೇಶನ ನೀಡಿದರಲ್ಲದೇ, ಆಗಸ್ಟ್‌ನಲ್ಲಿ ಶೇಕಡ 88ರಷ್ಟು ಮಂದಿಗೆ ಹಣ ಸಂದಾಯವಾಗಿದ್ದು, ಸೆಪ್ಟೆಂಬರ್ ತಿಂಗಳ ಹಣ ಹಂತ ಹಂತವಾಗಿ ಸಂದಾಯವಾಗುತ್ತಿದೆ. ಅಕ್ಟೋಬರ್ ತಿಂಗಳ ಹಣ ಶೇಕಡ 100ರಷ್ಟು ಫಲಾನುಭವಿಗಳಿಗೆ ಸಂದಾಯವಾಗುವಂತೆ ಮಾಡಬೇಕು ಎಂದರು.ಈ ವೇಳೆ ಇಲಾಖೆ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ನಿರ್ದೇಶಕಿ ಎಂ.ಎಸ್.ಅರ್ಚನಾ ಸೇರಿದಂತೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × one =
Remember me
