ಬೆಂಗಳೂರು:ರಾಜ್ಯದಲ್ಲಿ ಕ್ರಷರ್ (ಕಲ್ಲುಗಣಿಗಾರಿಕೆ)ಗಳ ರಾಜಸ್ವ ಸಂಗ್ರಹ ಸೋರಿಕೆ ತಡೆಗೆ ಡ್ರೋನ್ ಮತ್ತು ಎಐ (ಕೃತಕಬುದ್ಧಿಮತ್ತೆ) ತಂತ್ರಜ್ಞಾನದ ಸಾಧ್ಯತೆಗಳ ಬಳಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಗಣಿ ಮತ್ತು ಭೂವಿಜ್ಞಾನ, ನೋಂದಣಿ ಮತ್ತು ಮುದ್ರಾಂಕ, ಸಾರಿಗೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಉಪ ಖನಿಜ ರಾಜಸ್ವ ಸಂಗ್ರಹ ಹೆಚ್ಚಿಸಲು ಸೂಚಿಸಿದರು.
ಕಂದಾಯ ಇಲಾಖೆ ಲ್ಯಾಂಡ್ ಬ್ಯಾಂಕ್ ಸೃಜಿಸಿದಲ್ಲಿ, ಅರಣ್ಯ ಪರಿಹಾರ ಭೂಮಿ ನೀಡಲು ಅನುಕೂಲವಾಗುತ್ತದೆ ಈ ನಿಟ್ಟಿನಲ್ಲಿ ಗಮನಹರಿಸಬೇಕು. ಅರಣ್ಯ, ಗಣಿ ಮತ್ತು ಭೂವಿಜ್ಞಾನ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ತಿಳಿಹೇಳಿದರು.
ರಾಜಸ್ವ ಸಂಗ್ರಹ ಚುರುಕುಗೊಳಿಸಬೇಕು ಎಂದು ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಚಾಟಿ ಬೀಸಿದ ಸಿಎಂ ಸಿದ್ದರಾಮಯ್ಯ, ಕಾರ್ಯದಕ್ಷತೆ ಹೆಚ್ಚಿಸಿಕೊಳ್ಳುವಂತೆಯೂ ಕಿವಿಮಾತು ಹೇಳಿದರು.
ಹರಾಜಿಗೆ ಲಭ್ಯವಿರುವ ಗಣಿಗಳ ಹರಾಜು ಪ್ರಕ್ರಿಯೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಸೂಚನೆ ನೀಡಿದರು. ಸಿ ಶ್ರೇಣಿ ಗಣಿಗಳ ಹರಾಜು ಬಗೆಗಿನ ಮಾರ್ಗಸೂಚಿ ಬಗ್ಗೆ ಚರ್ಚಿಸಿದರೆ ಹೊರತು ಯಾವ ಸೂಚನೆಯನ್ನೂ ನೀಡಲಿಲ್ಲ.
ನೋಂದಣಿ ಮತ್ತು ಮುದ್ರಾಂಕ ಇಲಾಖೆ ತೆರಿಗೆ ಸಂಗ್ರಹ ಈವರೆಗೆ ನಿಗದಿತ ಗುರಿಗಿಂತ ಶೇಕಡ 110ರಷ್ಟು ಸಾಧನೆಯಾಗಿದೆ. ಮಾರ್ಗಸೂಚಿ ದರ ಪರಿಷ್ಕರಣೆ ಹಾಗೂ ಆಡಳಿತ ಸುಧಾರಣಾ ಕ್ರಮಗಳಿಂದ ಹೆಚ್ಚಿನ ತೆರಿಗೆ ಸಂಗ್ರಹದ ನಿರೀಕ್ಷೆಯಿದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು.
2023-24ನೇ ಸಾಲಿನಲ್ಲಿ 20 ಸಾವಿರ ಕೋಟಿ ರೂ. ಗುರಿಗೆ ಎದುರಾಗಿ 20,287.30 ಕೋಟಿ ರೂ. ಸಂಗ್ರಹವಾಗಿದೆ. ಜಿಐಎಸ್ ಆಧಾರಿತ ಆಸ್ತಿಗಳ ವಿವರ, ನಿಗದಿತ ಮಾರ್ಗಸೂಚಿ ದರ ಜಾರಿಗೊಳಿಸುವ ಮೂಲಕ ತೆರಿಗೆ ಸೋರಿಕೆ ತಡೆಗಟ್ಟಲು ಸಾಧ್ಯವಿದೆ ಎಂದು ಅಧಿಕಾರಿಗಳು ತಿಳಿಸಿದರು.
ಸಭೆಯಲ್ಲಿದ್ದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ದಸ್ತಾವೇಜುಗಳ ನೋಂದಣಿ ಡಿಜಿಟಲ್ ಆಗಿ ಮಾಡಲು ಕಾಯ್ದೆಗೆ ತಿದ್ದುಪಡಿಯಾಗಿದೆ. ಪ್ರಸಕ್ತ ಸಾಲಿನಲ್ಲಿ ಜಾರಿಗೆ ತರಲಾಗುವುದು ಎಂಬ ಮಾಹಿತಿ ನೀಡಿದರು.
ಉಪನೋಂದಣಾಧಿಕಾರಿಗಳ ಕಚೇರಿಗಳಲ್ಲಿ ನಾಗರಿಕ ಸೌಲಭ್ಯಗಳನ್ನು ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಸಭೆಯಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಇನ್ನಿತರ ಅಧಿಕಾರಿಗಳು ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
