ಹಾಸನ:ಇತ್ತೀಚಿನ ದಿನಗಳಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ರೀಲ್ಸ್​ ಮಾಡಿ ಹೆಚ್ಚಿನ ಫಾಲೋವರ್ಸ್​​ಗಳನ್ನು​​ ಸೆಳೆಯಬೇಕು ಎಂಬ ನಿಟ್ಟಿನಲ್ಲಿ ಹಲವಾರು ಯುವಕರು ಈ ಒಂದು ಹುಚ್ಚು ಪ್ರಯತ್ನಕ್ಕೆ ಮುಂದಾಗುತ್ತಿದ್ದಾರೆ. ಸದ್ಯ ಅದೇ ರೀತಿ ಹಾಸನದ ಇಬ್ಬರು ಯುವಕರು ನಕಲಿ ಗನ್ ಬಳಸಿಕೊಂಡು ಮಾಡಿದ ರೀಲ್ಸ್​​ಗಾಗಿ  ಇಂದು ಪೊಲೀಸರ ಅತಿಥಿಯಾಗಿದ್ದಾರೆ.
ಇದನ್ನೂ ಓದಿ:ಎಲ್ಲಾ ತಾಲೂಕು ಕಚೇರಿಗಳಲ್ಲು ‘ವಿಸಿಟರ್ಸ್ ಬುಕ್’ ಕಡ್ಡಾಯವಿರಲಿ: ಸಚಿವ ಪರಂ ಸೂಚನೆ
ಘಟನೆಯ ವಿವರ:ಹಾಸನದ ಇಬ್ಬರು ಯುವಕರು ಇನ್‌ಸ್ಟಾಗ್ರಾಮ್ ರೀಲ್ಸ್​ ಮಾಡಬೇಕು ಎಂದು ನಗರದ ರಿಂಗ್​ ರಸ್ತೆಯಲ್ಲಿ ತಮ್ಮ ಬುಲೆಟ್​ ಬೈಕ್​​ನಲ್ಲಿ ನಕಲಿ ಗನ್ ಹಿಡಿದು ವೀಡಿಯೋ ಮಾಡಿದ್ದಾರೆ. ಈ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪಲೋಡ್​ ಮಾಡಿದ್ದಾರೆ. ದೃಶ್ಯಾವಳಿ ವ್ಯಾಪಕವಾಗಿ ವೈರಲ್ ಆದ ಬೆನ್ನಲ್ಲೇ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ಯುವಕರು ನಕಲಿ ಗನ್ ಹಿಡಿದು ಮಾಡಿದ ರೀಲ್ಸ್​ ಅನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದರು. ವೀಡಿಯೋ ವ್ಯಾಪಕವಾಗಿ ಹರಿದಾಡಿದ ಬೆನ್ನಲ್ಲೇ ಪೊಲೀಸರು ದೃಶ್ಯವನ್ನು ಸೂಕ್ಷ್ಮವಾಗಿ ಗಮನಿಸಿ, ಗನ್ ಅಸಲಿಯೋ? ನಕಲಿಯೋ? ಎಂಬುದನ್ನು ಖಚಿತಪಡಿಸಿಕೊಂಡ ಬಳಿಕ ಹುಡುಗರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ:ವಾಟ್ಸ್​ಆ್ಯಪ್​ ಮೂಲಕ ಗ್ರಾಹಕಿಗೆ ಪ್ರಪೋಸ್​ ಮಾಡಿದ ಡೆಲಿವರಿ ಬಾಯ್​; ಕಂಪನಿ ವಿರುದ್ಧ ಕಿಡಿಕಾರಿದ ನೆಟ್ಟಿಗರು
ಸಾರ್ವಜನಿಕ ಸ್ಥಳಗಳಲ್ಲಿ ಅನುಚಿತ ವರ್ತನೆ ತೋರಿದ ಇಬ್ಬರು ಯುವಕರ ವಿರುದ್ಧ ಹಾಸನ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ,(ಏಜೆನ್ಸೀಸ್).
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + eleven =
Remember me
