ಶಿಗ್ಗಾಂವಿತಹಸೀಲ್ದಾರರಾಗಿದ್ದ ಚಂದ್ರಶೇಖರ ಗಾಳಿ ಅವರನ್ನು ಫೆ. 3ರಂದು ಹಲವು ಆರೋಪಗಳ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡಲಾಗಿತ್ತು. ಆದರೆ, ವರ್ಗಾವಣೆ ವಿರುದ್ಧ ಕೆಎಟಿಯಿಂದ ತಡೆಯಾಜ್ಞೆ ತಂದ ಗಾಳಿ, ಗುರುವಾರ ಸಂಜೆ ಮರಳಿ ಅಧಿಕಾರ ಸ್ವೀಕರಿಸಿದ್ದಾರೆ.
ಕಾನೂನು ಪ್ರಕಾರ ಎರಡು ವರ್ಷಗಳವರೆಗೆ ವರ್ಗಾವಣೆ ಮಾಡುವಂತಿಲ್ಲ. ಆದರೆ, ಜಿಲ್ಲಾ ಉಸ್ತುವಾರಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಶಿಫಾರಸಿನ ಮೇರೆಗೆ ಸರ್ಕಾರ ನನ್ನನ್ನು ಕಾನೂನು ಬಾಹಿರವಾಗಿ ವರ್ಗಾವಣೆ ಮಾಡಿದೆ. ಉಸ್ತುವಾರಿ ಸಚಿವರು ತಾಲೂಕಿನ ಸಮಸ್ಯೆಗೆ ಸ್ಪಂದಿಸುತ್ತಿರಲಿಲ್ಲ. ಅಭಿವೃದ್ಧಿ ವಿಷಯದ ಕುರಿತು ರ್ಚಚಿಸಲು ಸಮಯವನ್ನೂ ನೀಡುತ್ತಿರಲಿಲ್ಲ ಎಂದು ಬೊಮ್ಮಾಯಿ ವಿರುದ್ಧ ನೇರ ವಾಗ್ದಾಳಿ ಮಾಡಿದ್ದಾರೆ.
ಅತಿವೃಷ್ಟಿ, ನೆರೆ ಪರಿಹಾರ ನೀಡುವಲ್ಲಿ ತಾರತಮ್ಯ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಕೆಲಸಗಳನ್ನು ಮಾತ್ರ ಮಾಡುತ್ತಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ತಹಸೀಲ್ದಾರ್ ಚಂದ್ರಶೇಖರ ಗಾಳಿ ಅವರನ್ನು ವರ್ಗಾವಣೆ ಮಾಡಲಾಗಿತ್ತು ಎಂದು ತಿಳಿದು ಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − two =
Remember me
