ಬೆಂಗಳೂರು:ಕೆಲ ದಿನಗಳ ಹಿಂದಷ್ಟೇ ಪಕ್ಷ ಬಿಡುವ ಮಾತೇ ಇಲ್ಲ ಎಂದು ಊಹಾಪೋಹಗಳಿಗೆ ತೆರೆ ಎಳೆದಿದ್ದ ಬಿಜೆಪಿಯ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್​ ಕುಮಾರ್​ ಇದೀಗ ಪ್ರಧಾನಿ ಮೋದಿಯನ್ನು ದೆಹಲಿಯ ಸಂಸತ್ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಕೆಲ ದಿನಗಳಿಂದ ರಾಜ್ಯ ಬಿಜೆಪಿಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿಯ ನಡೆಗಳಿಂದ ನೊಂದಿದ್ದಾರಾ? ಬಿಜೆಪಿ ಬಿಟ್ಟು ಬೇರೊಂದು ಪಕ್ಷಕ್ಕೆ ಹಾರುತ್ತಾರಾ ಎನ್ನವ ರೀತಿಯ ಊಹಾಪೋಹಗಳು ಹರಿದಾಡುತ್ತಿದ್ದವು. ಈಗ ಅವೆಲ್ಲದ್ದಕ್ಕೂ ಅವರು ಟ್ವೀಟ್ ಮೂಲಕ ಬ್ರೇಕ್‍ ಹಾಕಿದ್ದರು.
ಈ ಹಿಂದೆ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಮಾಡಿದ್ದ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿತ್ತು. ತಮ್ಮ ಪತಿ ಅನಂತಕುಮಾರ್‌, ಲಾಲ್‌ಬಾಗ್‌ನಲ್ಲಿ ನೆಟ್ಟ ಗಿಡ ಬಾಡಿ ಹೋಗಿರುವ ಬಗ್ಗೆ ಟ್ವೀಟ್ ಮಾಡಿದ್ದರು.
“2015ರ ಜೂನ್‌ 5ರಂದು ಲಾಲ್‌ಬಾಗ್‌ ಪಶ್ಚಿಮ ದ್ವಾರದ ಬಳಿ ಅನಂತಕುಮಾರ್‌ ಅವರು ಈ ಗಿಡ ನೆಟ್ಟಿದ್ದರು. ಯಾಕೋ ಮುದುರಿ ಹೋಗಿದೆ. ಲಾಲ್‌ಬಾಗ್‌ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇವೆ. ಅನಂತಕುಮಾರ ಅವರ ಅನುಪಸ್ಥಿತಿಯಲ್ಲಿ ಈ ಗಿಡವನ್ನು ಉಳಿಸುವ ಜವಾಬ್ದಾರಿ ನಮ್ಮದು ಎಂಬುದು ನನ್ನ ಭಾವನೆ’ಎಂದಿದ್ದರು. ಇದಕ್ಕೂ ನೂರೆಂಟು ಅರ್ಥಗಳನ್ನು ಕಲ್ಪಿಸಲಾಗಿತ್ತು.
ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ.ಇಂಗ್ಲಿಷಿನಲ್ಲಿ ಹೇಳಬಹುದಾದರೆ," I am wedded to the party and ideology – no compromise "@BJP4India@BJP4Karnataka— Tejaswini AnanthKumar (@Tej_AnanthKumar)July 17, 2023
ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ.ಇಂಗ್ಲಿಷಿನಲ್ಲಿ ಹೇಳಬಹುದಾದರೆ," I am wedded to the party and ideology – no compromise "@BJP4India@BJP4Karnataka
ಕಳೆದ ಲೋಕಸಭೆ ಚುನಾವಣೆಯಲ್ಲಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ವಿಧಾನ ಸಭೆ ಚುನಾವಣೆಯಲ್ಲ್ಲೂ ಅವಕಾಶ ಸಿಗಲಿಲ್ಲ. ಇದೀಗ ಪ್ರಧಾನಿ ಮೋದಿಯನ್ನು ಭೇಟಿ ಮಾಡಿರುವ ತೇಜಸ್ವಿನಿ ಅನಂತ್​ ಕುಮಾರ್​ ಅವರಿಗೆ ಮುಂದೆ ಅವಕಾಶ ಸಿಗುವುದೇ ಎನ್ನುವ ಪ್ರಶ್ನೆ ಇನ್ನೂ ನಿಗೂಢವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
