ಹೈದರಾಬಾದ್:ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್) ಪಕ್ಷದ ಶಾಸಕರಿಗೆ ಬಿಜೆಪಿಗೆ ಸೇರುವಂತೆ ಹಣದ ಆಮಿಷವೊಡ್ಡಿದ ಪ್ರಕರಣ ಸಂಬಂಧ ವಿಚಾರಣೆಗೆ ಗೈರಾದ ‘ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿ.ಎಲ್​.ಸಂತೋಷ್ ಸೇರಿ ಮೂವರಿಗೆ ತೆಲಂಗಾಣ ವಿಶೇಷ ತನಿಖಾ ತಂಡ (ಎಸ್​ಐಟಿ) ಮಂಗಳವಾರ ಲುಕ್‌ಔಟ್ ಜಾರಿ ಮಾಡಿದೆ.
ಶಾಸಕರಿಗೆ ಹಣದ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ.21ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬಿ.ಎಲ್​.ಸಂತೋಷ್​ಗೆ ನ.19ರಂದೇ ಎಸ್‌ಐಟಿ ಸಮನ್ಸ್ ಜಾರಿ ಮಾಡಿತ್ತು. ವಿಚಾರಣೆಗೆ ಗೈರಾದರೆ ಬಂಧನದ ಎಚ್ಚರಿಕೆಯನ್ನೂ ಕೊಟ್ಟಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್​, ಸಂತೋಷ್​ ಅವರಿಗೆ ನೋಟಿಸಿನ ಪ್ರತಿ ಸಿಗುವವರೆಗೂ ಯಾವುದೇ ಕ್ರಮ ಕೈಗೊಳ್ಳಬಾರದು. ದೆಹಲಿ ಪೊಲೀಸರ ನೆರವಿನೊಂದಿಗೆ ಸಂತೋಷ್​ಗೆ ನೋಟಿಸ್​ ತಲುಪಿಸಬೇಕು ಎಂದು ಆದೇಶಿಸಿತ್ತು. ಆದರೆ, ವಿಚಾರಣೆಗೆ ನಿನ್ನೆ ಸಂತೋಷ್​ ಗೈರಾಗಿದ್ದು, ಸಂತೋಷ್, ತುಷಾರ್, ಜಗ್ಗು ಸ್ವಾಮಿ ವಿರುದ್ಧ ಎಸ್‌ಐಟಿ ಲುಕ್‌ಔಟ್ ಜಾರಿ ಮಾಡಿದೆ.
ತೆಲಂಗಾಣದ ಸೈಬರಾಬಾದ್ ಪೊಲೀಸರು ಅ.26ರಂದು ಅಜೀಜ್‌ನಗರದ ಫಾರ್ಮ್ ಹೌಸ್ ಮೇಲೆ‌ ದಾಳಿ ಮಾಡಿದ್ದಾಗ 15 ಕೋಟಿ ರೂ. ಪತ್ತೆಯಾಗಿತ್ತು. ಅದನ್ನು ವಶಪಡಿಸಿಕೊಂಡು, ಮೂವರನ್ನು ಬಂಧಿಸಲಾಗಿತ್ತು‌. ಟಿಆರ್‌ಎಸ್‌ನ ನಾಲ್ವರು ಶಾಸಕರ ಖರೀದಿಗೆ ಈ ಹಣ ತರಲಾಗಿತ್ತು ಎಂಬ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಇದೇ ಪ್ರಕರಣ ಸಂಬಂಧ ಈಗ ಸಮನ್ಸ್ ಜಾರಿ ಮಾಡಲಾಗಿದೆ.
ಶಂಕಿತ ಉಗ್ರನ ಟಾರ್ಗೆಟ್​ನಿಂದ ಸಿಎಂ ಜಸ್ಟ್​ ಮಿಸ್​! ಶಾರೀಕ್​ನ ಮೊಬೈಲ್ ಡಿಪಿಯಲ್ಲಿ ಇಶಾ ಫೌಂಡೇಶನ್ ಫೋಟೋ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಣಬೆ ಪದಾರ್ಥ ತಿಂದು ತಂದೆ-ಮಗ ಸಾವು!? ರಾತ್ರಿಯಿಡೀ ನರಳಾಡಿ ಮನೆಯ ಅಂಗಳದಲ್ಲೇ ದುರಂತ ಅಂತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − fourteen =
Remember me
