ಬೆಂಗಳೂರು:ಉತ್ತರದಿಂದ ದಕ್ಷಿಣದತ್ತ ಬಿಸಿ ಗಾಳಿ ಬೀಸುತ್ತಿರುವುದು ಹಾಗೂ ವಾತಾವರಣದಲ್ಲಿ ತೇವಾಂಶ ಕಡಿಮೆಯಾದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆಯಂತೆ ತಾಪಮಾನ ದಾಖಲಾದರೂ ಬಿಸಿಲಿನ ಬೇಗೆ ಹೆಚ್ಚಿದೆ. ರಾಜ್ಯದ ಇತರ ಜಿಲ್ಲೆಗಳಗಿಂತ ಕಲಬುರಗಿಯಲ್ಲಿ ಬುಧವಾರ ಗರಿಷ್ಠ ತಾಪಮಾನದಲ್ಲಿ 41.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಯಚೂರು 39.4, ವಿಜಯಪುರ 37.9, ಗದಗ 38.4, ಬೆಂಗಳೂರು 35.0, ಬೆಳಗಾವಿ 36.5, ಬಳ್ಳಾರಿ 39.4 ಉಷ್ಣಾಂಶ ದಾಖಲಾಗಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನ ತಾಪಮಾನ ಹೆಚ್ಚಳವಾಗಲಿದೆ. ಕಲಬುರಗಿ, ಯಾದಗಿರಿ, ಧಾರವಾಡ, ಕೊಪ್ಪಳ, ಗದಗ, ಬೀದರ್, ವಿಜಯಪುರ ಮತ್ತು ರಾಯಚೂರು ಸೇರಿ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ 40ರ ಅಸುಪಾಸಿನಲ್ಲಿ ಉಷ್ಣಾಂಶ ದಾಖಲಾಗುತ್ತಿದೆ. ಆದರೆ ಬಿಸಿಲಿನ ಪ್ರಖರತೆ ಹೆಚ್ಚಿರುವುದರಿಂದ ಜನತೆ ತತ್ತರಿಸಿದ್ದಾರೆ. ಬೆಳಗ್ಗಿನಿಂದಲೇ ನೆತ್ತಿ ಸುಡುವ ಬಿಸಿಲು ಸಂಜೆವರೆಗೆ ಮುಂದುವರಿದಿದ್ದು, ಜನತೆಗೆ ಕೆಂಡ ಮೈಮೇಲೆ ಬಿದ್ದಂತಹ ಅನುಭವ ಉಂಟಾಗುತ್ತಿದೆ. ಬಿರು ಬಿಸಿಲಿಗೆ ಹೆದರಿದ ಜನತೆ ಮನೆಬಿಟ್ಟು ಹೊರಗಡೆ ಕಾಲಿಡಲು ಭಯಪಡುವಂತಾಗಿದೆ. ಬರುವ ದಿನಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ.
ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು.ಗ್ರಾಮಾಂತರ, ಮೈಸೂರು, ಕೋಲಾರ, ತುಮಕೂರು, ಚಾಮರಾಜನಗರ ಹಾಗೂ ಹಾಸನದಲ್ಲಿ ಗರಿಷ್ಠ ತಾಪಮಾನದಲ್ಲಿ ಸರಾಸರಿ 35-37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ಬಿಸಿಲಿನ ಝುಳದಿಂದ ಜನರು ಬಸವಳಿಯುವಂತಾಗಿದೆ. ಈ ಬಾರಿ ವಾಡಿಕೆಗಿಂತ ಮುನ್ನ ಬೇಸಿಗೆ ಶುರುವಾಗಿದ್ದು, ಮೂರು ತಿಂಗಳು ಇರುತ್ತಿದ್ದ ಬೇಸಿಗೆ ಈ ವರ್ಷ 4 ತಿಂಗಳ ಕಾಲ ಇರಲಿದೆ. ಕಳೆದ ನವೆಂಬರ್​ನಲ್ಲಿ ಹೆಚ್ಚು ಮಳೆಯಾದ ಹಿನ್ನೆಲೆಯಲ್ಲಿ ಚಳಿಗಾಲದ ಅವಧಿ ಇಳಿಮುಖವಾಗಿತ್ತು. ಈ ಹಿನ್ನೆಲೆಯಲ್ಲಿ ವಾಡಿಕೆಗಿಂತ ಮುನ್ನ ಬೇಸಿಗೆ ಆರಂಭವಾಗಿದೆ. ಮಾ.1ರಿಂದ ಆರಂಭವಾಗುವ ಬೇಸಿಗೆ, ಮೇ 31ರವರೆಗೆ ಇರುತ್ತಿತ್ತು. ಆದರೆ, ಚಳಿಗಾಲದ ಅವಧಿ ಇಳಿಕೆಯಾದ ಹಿನ್ನೆಲೆಯಲ್ಲಿ ಫೆಬ್ರವರಿ 2ನೇ ವಾರದಿಂದಲೇ ಬೇಸಿಗೆ ಪ್ರಾರಂಭವಾಗಿದ್ದು, ಜೂ.15ರವರೆಗೆ ಇರಲಿದೆ.
ಯಾವುದೇ ಮಳೆ ಮೂನ್ಸೂಚನೆ ಇಲ್ಲದಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಹೆಚ್ಚಳವಾಗುತ್ತಿದೆ. ಮಳೆ ಸುರಿದರೆ ಸ್ವಯಂಚಾಲಿತವಾಗಿ ಉಷ್ಣಾಂಶ ಕಡಿಮೆಯಾಗುತ್ತಿದೆ. 3 ದಿನ ರಾಜ್ಯದಲ್ಲಿ ತಾಪಮಾನ ಹೆಚ್ಚಳವಾಗಲಿದೆಯೆಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ತೇವಾಂಶ ಕಡಿಮೆಯಾದ ಹಿನ್ನೆಲೆಯಲ್ಲಿ ತಾಪಮಾನ ಕಡಿಮೆ ಇದ್ದರೂ ಬಿಸಿಲಿನ ಪ್ರಖರತೆ ಹೆಚ್ಚಿರುತ್ತದೆ. ಈ ಬಗ್ಗೆ ಜನರು ಸುರಕ್ಷತೆ ವಹಿಸಬೇಕಿದೆ.
|ಡಾ.ಶ್ರೀನಿವಾಸರೆಡ್ಡಿಹವಾಮಾನ ತಜ್ಞ
ಸೆಖೆ ಹೆಚ್ಚಳ:ಪೂರ್ವ ಮುಂಗಾರು ಮಳೆ ಸುರಿದ ಪರಿಣಾಮ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ 1-3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇಳಿಕೆಯಾಗಿತು. ಈಗ ಮಳೆ ಮುನ್ಸೂಚನೆ ಇಲ್ಲದಿರುವುದು ಹಾಗೂ ವಾತಾವರಣದಲ್ಲಿ ತೇವಾಂಶ ಕಡಿಮೆಯಾದ ಹಿನ್ನೆಲೆಯಲ್ಲಿ ಬಿಸಿಲಿನ ಝುಳದ ಜತೆಗೆ ಸೆಖೆಯು ಹೆಚ್ಚಿದೆ. ಇದರಿಂದಾಗಿ ಹೊರಗಡೆ 5 ನಿಮಿಷ ಓಡಾಡುವುದಕ್ಕೂ ಕಷ್ಟಪಡುವಂತಾಗಿದ್ದು, ರಾತ್ರಿ ವೇಳೆ ಸರಿಯಾಗಿ ನಿದ್ದೆ ಬಾರದೆ ಒದ್ದಾಡುವಂತಾಗಿದೆ.
ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಸಿ ಗಾಳಿಯ ಆರ್ಭಟ ಹೆಚ್ಚಾಗಿದ್ದು, ತಾಪಮಾನ 46 ಡಿಗ್ರಿ ಸೆಲ್ಷಿಯಸ್​ಗೆ ತಲುಪುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದೆಹಲಿಯಲ್ಲಿ 2017 ಏಪ್ರಿಲ್ 21ರಂದು ಗರಿಷ್ಠ ತಾಪಮಾನ ದಾಖಲಾಗಿತ್ತು. 1941ರ ಏಪ್ರಿಲ್ 29ರ 45.6 ಡಿಗ್ರಿ ಸೆಲ್ಷಿಯಸ್ ಇದುವರೆಗಿನ ಏಪ್ರಿಲ್ ಮಾಸದ ಗರಿಷ್ಠ ಉಷ್ಣತೆಯಾಗಿತ್ತು. ದೆಹಲಿಯ ಬೇಸ್ ಹವಾಮಾನ ಕೇಂದ್ರವಾದ ಸಫ್ದರ್​ಜಂಗ್ ವೀಕ್ಷಣಾಲಯ ಮಂಗಳವಾರ 40.8 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಿಸಿತ್ತು. ಗುರುವಾರ ಅದು 44 ಡಿಗ್ರಿ ಸೆಲ್ಷಿಯಸ್​ಗೆ ಏರುವ ಲಕ್ಷಣಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ದೆಹಲಿಯ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 46 ಡಿಗ್ರಿ ಸೆಲ್ಷಿಯಸ್ ಆಗಲೂಬಹುದು ಎಂದೂ ಐಎಂಡಿ ಅಂದಾಜು ಮಾಡಿದೆ.
ಲಾಕ್​ಡೌನ್​ ಸೆಕ್ಸ್​: ಆರ್​ಟಿಐನಲ್ಲಿ ಬಹಿರಂಗವಾಯ್ತು ಆತಂಕಕಾರಿ ವಿಷಯ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − ten =
Remember me
