ಬೆಂಗಳೂರು:ಹಿಂದು ಧಾರ್ಮಿಕ ದತ್ತಿ ಇಲಾಖೆಯಿಂದ ಹಿಂದುಯೇತರ ಧಾರ್ಮಿಕ ಸಂಸ್ಥೆಗಳಿಗೆ ನೀಡುತ್ತಿದ್ದ ತಸ್ತಿಕ್ ಮತ್ತು ವರ್ಷಾಸನಕ್ಕೆ ತಡೆ ನೀಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಮುಜರಾಯಿ ದೇವಸ್ಥಾನದ ಹುಂಡಿ ಹಣವನ್ನು ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಈ ಬಗ್ಗೆ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಡೆ ನೀಡಿದ್ದರು. ಇವರ ಆದೇಶದಂತೆ ಹಿಂದು ಧಾರ್ಮಿಕ ದತ್ತಿ ಇಲಾಖೆ ದೇವಸ್ಥಾನದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ಕೊಡದಂತೆ ತಡೆ ನೀಡಿ ಆದೇಶಿಸಿದೆ.
ಇದನ್ನೂ ಓದಿ:ಬಿಎಸ್‌ವೈ ಕಣ್ಣೀರಲ್ಲಿ ಬಿಜೆಪಿ ಕೊಚ್ಚಿ ಹೋಗುತ್ತದೆ; ಯಡಿಯೂರಪ್ಪ ಕಣ್ಣೀರನ್ನು ಸವಾಲಾಗಿ ಸ್ವೀಕರಿಸಿದ್ದೇವೆ: ದಿಂಗಾಲೇಶ್ವರ ಶ್ರೀ
ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಕುರಿತು ಎದ್ದಿರುವ ಚರ್ಚೆಯ ಕುರಿತು ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದೆ. ರಾಜ್ಯದ 757 ಪ್ರಾರ್ಥನಾ ಕೇಂದ್ರಗಳಿಗೆ ತಸ್ತಿಕ್ ಹಾಗೂ 111 ವರ್ಷಾಸನ ಪಡೆಯುತ್ತಿರುವ ಪ್ರಾರ್ಥನಾ ಕೇಂದ್ರಗಳಿಗೆ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ಮೂಲಕ ನೀಡುತ್ತಿದ್ದ ಅನುದಾನ ತಡೆ ಹಿಡಿದು ಅಧಿಕೃತ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಬಿಎಸ್​ವೈ ರಾಜೀನಾಮೆ: ಅಚ್ಚರಿ ಮೂಡಿಸಿದೆ ಕೇಂದ್ರ ನಾಯಕರ ಮೌನ!
ಇನಾಂ ರದ್ದತಿ ಕಾಯ್ದೆ 1977ರ ಪರಿಹಾರಾರ್ಥವಾಗಿ ನೀಡುತ್ತಿರುವ ತಸ್ತಿಕ್ ಮತ್ತು ವರ್ಷಾಸನವನ್ನು ಇನ್ನು ಮುಂದೆ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಮೂಲಕ ತಸ್ತಿಕ್ ಮತ್ತು ವರ್ಷಾಸನ ನೀಡಲು ಅನುದಾನ ಬಿಡುಗಡೆ ಮಾಡತಕ್ಕದ್ದು ಎಂದು ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಆದೇಶದಲ್ಲಿ ಉಲ್ಲೇಖಿಸಿದೆ.
Photo Gallery | ತುಂಗಾಭದ್ರಾ ಜಲಾಶಯ ಈಗ ಜಗಮಗ: ವಿದ್ಯುದ್ದೀಪಗಳಿಂದ ಕಂಗೊಳಿಸುತ್ತಿರುವ ಜಲಧಾರೆ..

ಹುಟ್ಟುಕುರುಡು ಮಗುವಿನ ಕಣ್ಣುಗಳಿಗೆ ತಾರಾ ಕಳೆ; ನಟಿ ಜಯಂತಿಯ ನೇತ್ರದಾನ..

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:2 + 20 =
Remember me
