ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ಕಳೆದ ಎರಡು ತಿಂಗಳಿನಿಂದ ಬಾಗಿಲು ಮುಚ್ಚಿದ್ದ ರಾಜ್ಯದ ಎಲ್ಲ ದೇವಸ್ಥಾನಗಳು ಜೂ.1ರಿಂದ ಬಾಗಿಲು ತೆರೆಯಲಿವೆ.
ದೈಹಿಕ ಅಂತರ ಕಾಯ್ದುಕೊಂಡು ಪೂಜೆಗೆ ಅವಕಾಶ ಮಾಡಿಕೊಡಲು ಸರ್ಕಾರ ನಿರ್ಧರಿಸಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲು ದೇವಸ್ಥಾನಗಳಿಗೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿರಾಜ್ಯದಲ್ಲಿ ಮೇ 31ರವರೆಗೂ ಇರಲಿದೆ ಮಳೆಯ ಅಬ್ಬರ
ದೇವಸ್ಥಾನದಲ್ಲಿ ದೇವರ ದರ್ಶನ ಮಾತ್ರವಲ್ಲದೆ, ಹಲವು ಸೇವೆ/ಹರಕೆಗಳಿಗೆ ಅವಕಾಶ ಕಲ್ಪಿಸಲಾಗುತ್ತದೆ. ಹೆಚ್ಚಿನ ಜನ ಸೇರಿ ಜಾತ್ರಾ ಮಹೋತ್ಸವಗಳನ್ನು ನಡೆಸುವುದಕ್ಕೆ ಅವಕಾಶ ಇರುವುದಿಲ್ಲ.
ಮಸೀದಿ, ಚರ್ಚ್‌ಗಳನ್ನು ತೆರೆಯುವ ಬಗ್ಗೆ ಸದ್ಯಕ್ಕೆ ನಿರ್ಧಾರ ತೆಗೆದುಕೊಂಡಿಲ್ಲ. ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ದೇವಾಲಯಗಳ ಬಗ್ಗೆಯಷ್ಟೇ ಸಿಎಂ ಜತೆ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಜರಾಯಿ ಸಚಿವ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಇಂಧನ ಸೋರಿಕೆಯಿಂದ ತುರ್ತು ಭೂಸ್ಪರ್ಶ ಮಾಡಿದ ಏರ್​ ಏಷ್ಯಾ ವಿಮಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − seven =
Remember me
