ಸುಬ್ರಹ್ಮಣ್ಯ:ರಾಜ್ಯದ ಮುಜರಾಯಿ ದೇವಳಗಳಲ್ಲಿ ಸೇವೆಗಳನ್ನು ಆರಂಭಿಸಬೇಕು ಎಂಬ ಬೇಡಿಕೆ ಭಕ್ತರಿಂದ ಬರುತ್ತಿದೆ. ಆರಂಭಿಕ ಹಂತವಾಗಿ ಕುಂಕುಮಾರ್ಚನೆ, ಅಭಿಷೇಕ ಮುಂತಾದ ಸಣ್ಣ ಸೇವೆಗಳನ್ನು ಆರಂಭಿಸುವ ಚಿಂತನೆ ಇದೆ. ಆರೋಗ್ಯ ಇಲಾಖೆಯೊಂದಿಗೆ ರ್ಚಚಿಸಲಿದ್ದು, ಅನುಮತಿ ನೀಡಿದರೆ ವಾರದೊಳಗೆ ಸಾಮಾನ್ಯ ಸೇವೆಗಳು ಆರಂಭವಾಗಲಿವೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಆದರ್ಶ ಗ್ರಾಮ ಬಳ್ಪದ ಎಣ್ಣೆಮಜಲಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎ ದರ್ಜೆಯ 80ಕ್ಕೂ ಅಧಿಕ ದೇವಸ್ಥಾನಗಳಿಗೆ ರಾಜ್ಯ ಧಾರ್ವಿುಕ ಪರಿಷತ್ ಮೂಲಕ ವ್ಯವಸ್ಥಾಪನಾ ಸಮಿತಿ ರಚಿಸಲು ನಿರ್ಣಯಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸದಸ್ಯರಾಗಲು ಅರ್ಜಿ ಹಾಕಿದವರ ಬಗ್ಗೆ ಪೊಲೀಸ್ ಪರಿಶೀಲನೆ ಸೇರಿ ಇತ್ಯಾದಿ ಕ್ರಮಗಳು ತ್ವರಿತಗತಿಯಲ್ಲಿವೆ ಎಂದರು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಬೇಕು ಎಂದು ಅನೇಕರು ಸಲಹೆ ನೀಡಿದ್ದಾರೆ. ಆದರೆ ಕೆಲವರಲ್ಲಿ ವ್ಯವಸ್ಥಾಪನಾ ಸಮಿತಿ ಆಗಬೇಕೆಂಬ ಕಲ್ಪನೆ ಇದೆ. ಶೀಘ್ರವೇ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಸಚಿವರು ಹೇಳಿದರು.
ಎರಡೇ ವಾರದಲ್ಲಿ 97 ಸಾವಿರ ಮಕ್ಕಳಲ್ಲಿ ಸೋಂಕು; ಶಾಲೆಗಳ ಮರು ಆರಂಭ ನಿರ್ಧಾರ ಹುಟ್ಟು ಹಾಕಿದೆ ಭಾರಿ ಚರ್ಚೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 11 =
Remember me
