ಉಡುಪಿ:ಕರಾವಳಿಯಲ್ಲಿ ನಿನ್ನೆ ರಾತ್ರಿಯಷ್ಟೇ ಖಾಸಗಿ ಬಸ್ಸೊಂದು ಪಲ್ಟಿಯಾಗಿದ್ದು, ಇಂದು ಟೆಂಪೊ ಕೂಡ ಪಲ್ಟಿಯಾಗಿರುವ ಪ್ರಕರಣ ಸಂಭವಿಸಿದೆ. ಹದಿನೈದು ಜನ ಕಾರ್ಮಿಕರು ಪ್ರಯಾಣಿಸುತ್ತಿದ್ದ ಈ ಟೆಂಪೊ ಅಪಘಾತಕ್ಕೀಡಾಗಿ ಮಗುಚಿ ಬಿದ್ದಿದೆ.
ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-66ರ ಬೈಕಾಡಿ-ಬಿ.ಸಿ.ರೋಡ್​ನಲ್ಲಿ ಈ ಅಪಘಾತ ಸಂಭವಿಸಿದೆ. ಈ ಟೆಂಪೊದಲ್ಲಿ ಕಾಂಕ್ರೀಟ್ ಕೆಲಸಗಾರರನ್ನು ತುಂಬಿಕೊಂಡಿದ್ದು, ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮಾತ್ರವಲ್ಲ, ಟೆಂಪೊದಲ್ಲಿದ್ದ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಇದನ್ನೂ ಓದಿ:ಖಾಸಗಿ ಬಸ್​ ಪಲ್ಟಿ, ಒಬ್ಬನ ಸ್ಥಿತಿ ಗಂಭೀರ; ಮದುವೆಗೆ ಹೊರಟಿದ್ದ 15ಕ್ಕೂ ಅಧಿಕ ಮಂದಿಗೆ ಗಾಯ…
ಅಪಘಾತ ಸಂಭವಿಸಿದ ಬಳಿಕ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸ್ಥಳೀಯರು ನೆರವಾದರು. ಗಾಯಗೊಂಡವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಮಿಕರನ್ನು ಕಾನೂನುಬಾಹಿರವಾಗಿ ಈ ಟೆಂಪೊದಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದರು ಎನ್ನಲಾಗಿದೆ.
ಎರಡೆರಡು ಸಲ ಲಸಿಕೆ ಪಡೆದರೂ ಕರೊನಾ ಬಂತು!; ವ್ಯಾಕ್ಸಿನ್​ ತಗೊಂಡ ಜಿಲ್ಲಾಧಿಕಾರಿಗೂ ಸೋಂಕು!​

ಹಳ್ಳಕ್ಕೆ ಬಿದ್ದ ಬೈಕ್​: ಮೂವರು ಸವಾರರ ಪೈಕಿ ಇಬ್ಬರು ಸ್ಥಳದಲ್ಲೇ ಸಾವು, ಇನ್ನೊಬ್ಬನಿಗೆ ಗಂಭೀರ ಗಾಯ..

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:three + thirteen =
Remember me
