ರಾಮನಗರ:ರಾಜ್ಯದಲ್ಲಿ ವಾಹನಗಳು ಪಲ್ಟಿ ಆಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಕೆಲವೇ ಗಂಟೆಗಳ ಮೊದಲು ಮದ್ಯ ತುಂಬಿದ್ದ ವಾಹನ ಪಲ್ಟಿ ಆದ ಬೆನ್ನಿಗೇ ಇದೀಗ ಗ್ಯಾಸ್​ ಸಿಲಿಂಡರ್​ಗಳನ್ನು ತುಂಬಿದ್ದ ಟೆಂಪೋ ಪಲ್ಟಿ ಆಗಿದೆ. ದುರಂತವೆಂದರೆ ಸಿಲಿಂಡರ್​​ ಬೈಕ್​ ಸವಾರನ ಮೇಲೆ ಬಿದ್ದು ಆತ ಗಂಭೀರವಾಗಿ ಗಾಯಗೊಂಡಿದ್ದಾನೆ.
ರಾಮನಗರ ತಾಲೂಕಿನ ಪಾದರಹಳ್ಳಿ ಗ್ರಾಮದ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಗ್ಯಾಸ್​ ಸಿಲಿಂಡರ್​ಗಳನ್ನು ತುಂಬಿಕೊಂಡು ಹೊರಟಿದ್ದ ಈ ಟೆಂಪೋ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಅದೇ ಸಂದರ್ಭದಲ್ಲಿ ಸಾಗುತ್ತಿದ್ದ ಬೈಕ್​ ಮೇಲೂ ಸಿಲಿಂಡರ್​ ಬಿದ್ದಿದ್ದು, ಸವಾರ ಮಂಜುನಾಥ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.
ಮಾಗಡಿಯಿಂದ ರಾಮನಗರಕ್ಕೆ ಸಾಗುತ್ತಿದ್ದ ಈ ವಾಹನದಲ್ಲಿ ಸುಮಾರು 50 ಭಾರತ್ ಗ್ಯಾಸ್ ಸಿಲಿಂಡರ್​ಗಳಿದ್ದು, ಭಾರಿ ಅನಾಹುತವೊಂದು ತಪ್ಪಿಹೋಗಿದೆ. ಸಿಲಿಂಡರ್​​ ಸ್ಫೋಟಗೊಂಡಿದ್ದರೆ ಭೀಕರ ಅಗ್ನಿದುರಂತ ಸಂಭಿಸುವ ಸಾಧ್ಯತೆ ಇತ್ತು. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದು ಬರೀ ಹೆದ್ದಾರಿಯಲ್ಲ, ‘ಮದ್ಯ’ರಸ್ತೆ: ಆಲ್ಕೋಹಾಲ್​ಗಾಗಿ ಮುಗಿಬಿದ್ದ ಪಾನಪ್ರಿಯರು..

ವಿದ್ಯುತ್ ಸ್ಪರ್ಶದಿಂದಾಗಿ ‘ಜೂನಿಯರ್ ರವಿಚಂದ್ರನ್​’ ಸಾವು…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × 1 =
Remember me
