ಹಾವೇರಿ:ರಾಜ್ಯದ ಹಲವೆಡೆ ವಿದ್ಯಾರ್ಥಿಗಳ ಗುಂಪಿನ ನಡುವೆ ಹಿಜಾಬ್​ ಹಾಗೂ ಕೇಸರಿ ಶಾಲಿನ ವಿಚಾರವೇ ದೊಡ್ಡ ಸಂಗತಿಯಾಗಿ ಸಂಘರ್ಷ ಉಂಟಾಗಿದೆ. ಆದರೆ ಇಲ್ಲೊಂದು ಕಡೆ ಶಾಲೆಗೆ ಹೋಗಿ ಬರಲು ಸರಿಯಾದ ಬಸ್​ ಇಲ್ಲದೆ ಹತ್ತು ವಿದ್ಯಾರ್ಥಿಗಳು ಒಂದೇ ಆಟೋಗೆ ಹತ್ತಿ ಪ್ರಯಾಣಿಸಿದ್ದು, ಸ್ವಲ್ಪ ದೂರ ಹೋಗುವಷ್ಟರಲ್ಲೇ ಆಟೋ ಪಲ್ಟಿಯಾಗಿದೆ.
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕಂಚಿನೆಗಳೂರು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಬೆಳಗಾಲಪೇಟೆ ಗ್ರಾಮದ ಉರ್ದು ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳು ಶಾಲೆ ಬಿಟ್ಟ ನಂತರ ಕಂಚಿನೆಗಳೂರು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ.
ಇದನ್ನೂ ಓದಿ:ಸಮತಾಮೂರ್ತಿ ಅನಾವರಣ: ವಿಶ್ವದ 2ನೇ ಅತಿ ಎತ್ತರದ ಪ್ರತಿಮೆ ಲೋಕಾರ್ಪಣೆ ಮಾಡಿದ ಮೋದಿ
ಗಾಯಗೊಂಡವರೆಲ್ಲರೂ ಕಂಚಿನೆಗಳೂರು ಗ್ರಾಮದ ವಿದ್ಯಾರ್ಥಿಗಳು. ಗಾಯಾಳುಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದೆ.ಶಾಲೆಗೆ ಹೋಗಿ ಬರಲು ಸಮಯಕ್ಕೆ ಸರಿಯಾಗಿ ಬಸ್​ ಸೌಲಭ್ಯ ಇಲ್ಲದ ಕಾರಣ ಈ ವಿದ್ಯಾರ್ಥಿಗಳು ಆಟೋ ರಿಕ್ಷಾದಲ್ಲಿ ತೆರಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಿತ್ತು. ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯ ಕಾಂಗ್ರೆಸ್​ನಲ್ಲಿ ಶುರುವಾಗಿದೆ ಪಾದಯಾತ್ರೆ ಮೇನಿಯಾ: ಮತ್ತೆ ಹಲವು ಕಡೆಯಿಂದ ಯಾತ್ರೆಗೆ ಬೇಡಿಕೆ..

ಐತಿಹಾಸಿಕ ಶ್ರೀಗುರು ಕೊಟ್ಟೂರೇಶ್ವರ ಜಾತ್ರೆಗೆ ಸಾರ್ವಜನಿಕರಿಗಿಲ್ಲ ಪ್ರವೇಶ: ರಥೋತ್ಸವಕ್ಕೆ ಕರೊನಾ ಕರಿಛಾಯೆ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:3 × five =
Remember me
