ಮಂಡ್ಯ:ಭಾರಿ ಮಳೆ ಹಿನ್ನೆಲೆಯಲ್ಲಿ ಮಂಡ್ಯದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ ಬೆಂಗಳೂರು-ಮೈಸೂರು ನಡುವಿನ ಹತ್ತು ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು, ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.
ಇಂದು ಬೆಳಗ್ಗೆಯಿಂದ ಬೆಂಗಳೂರು-ಮೈಸೂರು ನಡುವಿನ ಹತ್ತು ಸುಮಾರು ಹತ್ತು ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಬಹುತೇಕ ಮೆಮೂ ಹಾಗೂ ಪ್ಯಾಸೆಂಜರ್ ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು, ಉಳಿದಂತೆ ಕೆಲವು ರೈಲುಗಳ ಸಂಚಾರ ಸಮಯದಲ್ಲಿ ವ್ಯತ್ಯಾಸವಾಗಿದೆ.
ಇದನ್ನೂ ಓದಿ:ಮಂಡ್ಯದಲ್ಲಿ ಭಾರಿ ಮಳೆ, ಪ್ರವಾಹದಲ್ಲಿ ಸಿಲುಕಿದ್ದ 10 ಮಂದಿಯ ರಕ್ಷಣೆ..
ಮದ್ದೂರು ಹಾಗೂ ಹನಕೆರೆ ಬಳಿಯ 627ನೇ ಬ್ರಿಡ್ಜ್​ನಲ್ಲಿ ಅಪಾಯಕಾರಿಯಾಗಿ ನೀರು ಹರಿಯುತ್ತಿರುವ ಕಾರಣದಿಂದ ರೈಲು ಸಂಚಾರ ಸ್ಥಗಿತಗೊಂಡಿದೆ. ನಾಳೆ ಪರಿಸ್ಥಿತಿ ನೋಡಿಕೊಂಡು ರೈಲು ಸಂಚಾರ ಆರಂಭವಾಗಲಿದೆ. ಈಗಾಗಲೇ ಮಂಡ್ಯ-ಮದ್ದೂರು ರಾಷ್ಟ್ರೀಯ ಹೆದ್ದಾರಿಯಲ್ಲೂ ಸಂಚಾರ ಬಂದ್ ಆಗಿದ್ದು, ಬದಲಿ ಮಾರ್ಗದ ಮೂಲಕ ವಾಹನಗಳು ಸಂಚರಿಸುತ್ತಿವೆ.
ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಇನ್ನಷ್ಟು ಜೋರು; ನಾಳೆ-ನಾಡಿದ್ದು ಕರಾವಳಿ-ಮಲೆನಾಡಲ್ಲಿ ರೆಡ್ ಅಲರ್ಟ್..

ಪಿಎಸ್​ಐ ನೇಮಕಾತಿಗಾಗಿ ಶೀಘ್ರದಲ್ಲೇ ಮರುಪರೀಕ್ಷೆ: ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ..

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ಇದೇ ಮೊದಲ ಸಲ ರಾಜ್ಯ ಸಚಿವರ ಸ್ಥಾನಮಾನ ನೀಡಿದ ಸರ್ಕಾರ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − five =
Remember me
