ಬೆಂಗಳೂರು:ಮಹಾನಗರದಲ್ಲಿರುವ ಇಂದಿರಾ ಕ್ಯಾಂಟೀನ್‌ಗಳ ಪುನಶ್ಚೇತನಗೊಳಿಸಿ ಅವುಗಳನ್ನು ಇನ್ನಷ್ಟು ಜನಸ್ನೇಹಿ ಆಗಿಸುವ ನಿಟ್ಟಿನಲ್ಲಿ ಬಿಬಿಎಂಪಿ ಹೊಸದಾಗಿ ವಲಯವಾರು ಟೆಂಡರ್ ಆಹ್ವಾನಿಸಲು ಚಿಂತನೆ ನಡೆಸಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಇಂದಿರಾ ಕ್ಯಾಂಟೀನ್‌ಗಳನ್ನು ಸಬಲೀಕರಣಗೊಳಿಸಲು ನಿರ್ಧರಿಸಲಾಗಿದೆ. ಸ್ವತ: ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕ್ಯಾಂಟೀನ್‌ಗಳ ಮೂಲಕ ಬಡ ಜನರಿಗೆ ಹಸಿವು ನೀಗಿಸುವ ತಾಣಗಳಾಗಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಜತೆಗೆ ಗುಣಮಟ್ಟದ ಆಹಾರ ವಿತರಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದರು.
ಸದ್ಯದಲ್ಲೇ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಇಂದಿರಾ ಕ್ಯಾಂಟೀನ್‌ಗಳ ಪುನಶ್ಚೇತನಕ್ಕೆ ಅನುದಾನ ನಿಗದಿಪಡಿಸಲಾಗುತ್ತದೆ. ಹೆಚ್ಚುವರಿ ಕ್ಯಾಂಟೀನ್ ತೆರೆಯಲು ಸರ್ಕಾರ ಅವಕಾಶ ಮಾಡಿಕೊಡುವ ಹಿನ್ನೆಲೆಯಲ್ಲಿ ಆರ್ಥಿಕ ಸಂಪನ್ಮೂಲ ಕೊರತೆ ಉಂಟಾಗದಂತೆ ಸರ್ಕಾರ ಹೊಸ ಮಾರ್ಗಸೂಚಿಯನ್ನು ತರಲಿದೆ.
ಇದನ್ನೂ ಓದಿ:ದರ್ಗಾ, ಮಸೀದಿಗಳಲ್ಲೂ ಇನ್ನು ಇ-ಹುಂಡಿ ಸೇವೆ; ಸಚಿವ ಜಮೀರ್​ ಅಹ್ಮದ್​ ಚಾಲನೆ
ಜತೆಗೆ ತಿನಿಸುಗಳ ದರ ಹೆಚ್ಚಳ ಮಾಡದೆ ಇನ್ನಷ್ಟು ಹೊಸ ಮೆನು ಸೇರ್ಪಡೆ ಮಾಡುವಂತೆ ಪಾಲಿಕೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಒಪ್ಪಿಗೆ ದೊರೆತ ಬಳಿಕ ಇಂದಿರಾ ಕ್ಯಾಂಟೀನ್‌ಗಳನ್ನು ಇನ್ನಷ್ಟು ಉತ್ತಮವಾಗಿ ನಡೆಸಲು ವಲಯವಾರು ಟೆಂಡರ್ ಆಹ್ವಾನಿಸುವತ್ತ ಪಾಲಿಕೆ ದೃಷ್ಟಿ ಹರಿಸಿದೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಇಂದಿರಾ ಕ್ಯಾಂಟೀನ್‌ಗಳಿಗೆ ಹೊಸ ರೂಪ ನೀಡಲು ಪಾಲಿಕೆ ಬದ್ಧವಾಗಿದೆ. ಕ್ಯಾಂಟೀನ್‌ಗಳು ಯಾವುದೇ ಸಮಸ್ಯೆಗಳಿಲ್ಲದೆ ಸುಗಮವಾಗಿ ನಡೆಸಿಕೊಂಡು ಹೋಗಲು ವಲಯವಾರು ಟೆಂಡರ್ ನೀಡುವ ಪ್ರಸ್ತಾಪ ಇದೆ. ಒಬ್ಬ ಗುತ್ತಿಗೆದಾರರಿಗೆ ಗರಿಷ್ಠ ಎರಡು ವಲಯದ ಗುತ್ತಿಗೆ ನೀಡುವ ಸಾಧ್ಯತೆ ಇದೆ. ಸದ್ಯಕ್ಕೆ ಈ ವಿಷಯ ಚರ್ಚೆಯಲ್ಲಿದ್ದು, ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 15 =
Remember me
