ಕೊಪ್ಪಳ:ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮದ ಸಲುವಾಗಿ ಹಾಕಿದ್ದ ಶಾಮಿಯಾನ ಬಿದ್ದು ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಇಂಥದ್ದೊಂದು ದುರಂತ ಸಂಭವಿಸಿದೆ.
ಕೊಪ್ಪಳದ ಕಾರಟಗಿ ತಾಲೂಕಿನ ಮುಷ್ಟೂರು ಕ್ಯಾಂಪ್​ನಲ್ಲಿ ಇಂದು ಈ ಅವಘಡ ಸಂಭವಿಸಿದೆ. ಶ್ರೀನಿವಾಸ ಕಲ್ಯಾಣ ಪ್ರಯುಕ್ತ ಅಡುಗೆ ಮಾಡುವ ಜಾಗದಲ್ಲಿ ಹಾಕಿದ್ದ ಶಾಮಿಯಾನ, ಜೋರಾದ ಗಾಳಿ ಬೀಸಿದ್ದರಿಂದ ಕಿತ್ತು ಹಾರಿ ಹೋಗಿ ಅಡುಗೆಗೆ ತರಕಾರಿ ಕತ್ತರಿಸುತ್ತಿದ್ದ ಮಹಿಳೆಯರ ಮೇಲೆ ಬಿದ್ದಿದೆ.\
ಇದನ್ನೂ ಓದಿ:ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ
ಶಾಮಿಯಾನದ ಕಂಬಗಳು ಮೈಮೇಲೆ ಬಿದ್ದ ಪರಿಣಾಮವಾಗಿ ಪ್ರಗತಿನಗರ ನಿವಾಸಿ ಅಂಜಿನಮ್ಮ (45) ಸಾವಿಗೀಡಾಗಿದ್ದಾರೆ. ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ.
ಇದನ್ನು ಕುಡಿದರೆ ಹೃದಯಾಘಾತದ ಸಾಧ್ಯತೆ ತೀರಾ ಕಡಿಮೆ ಅಂತೆ!; ಏನಿದು, ಎಷ್ಟು ಕುಡಿಯಬೇಕು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
