ರಾಯಚೂರು:ಯುವತಿಯೊಬ್ಬಳು ಗಣೇಶ ವಿಸರ್ಜನೆಗಾಗಿ ನಿರ್ಮಿಸಿದ್ದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮೊದಲು 4 ಪುಟಗಳ ಸುದೀರ್ಘ ಡೆತ್​ನೋಟ್​ ಕೂಡ ಬರೆದಿಟ್ಟಿದ್ದಳು. ಇದೀಗ ಆ ಡೆತ್​​ನೋಟ್ ಮಾಹಿತಿ ಬಹಿರಂಗಗೊಂಡಿದ್ದು, ಯುವತಿ ಅದರಲ್ಲಿ ತನ್ನ ಕೊನೆಯ ಆಸೆಯನ್ನೂ ಹೇಳಿಕೊಂಡಿದ್ದಾಳೆ.
ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಈ ಘಟನೆ ನಡೆದಿದೆ. ಹತ್ತನೇ ತರಗತಿ ವಿದ್ಯಾರ್ಥಿನಿ ಸಾರಿಕಾ (16) ಆತ್ಮಹತ್ಯೆ ಮಾಡಿಕೊಂಡವಳು. ನಾಲ್ಕು ಪುಟಗಳ ಡೆತ್​ನೋಟ್ ಸಿಕ್ಕಿದ್ದರೂ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ ನಿಖರವಾದ ಮಾಹಿತಿ ಅದರಲ್ಲಿ ಉಲ್ಲೇಖವಾಗಿಲ್ಲ. ಆದರೆ ಆಕೆ ಅದರಲ್ಲಿ ವ್ಯಕ್ತಪಡಿಸಿರುವ ಕೊನೆಯ ಆಸೆಯಂತೂ ವಿಚಿತ್ರವಾಗಿದೆ.
ತನ್ನ ಗೆಳೆಯ-ಗೆಳತಿಯರೊಂದಿಗೆ ಕಳೆದ ಸಂತೋಷದ ಕ್ಷಣಗಳನ್ನು ಈ ಯುವತಿ ಹೇಳಿಕೊಂಡಿದ್ದಾಳೆ. ಅಲ್ಲದೆ ತನ್ನದೊಂದು ಕೊನೆಯ ಆಸೆಯನ್ನೂ ತಿಳಿಸಿದ್ದಾಳೆ. ‘ನನ್ನದು ಒಂದೇ ಆಸೆ, ನನ್ನ ಶವ ನೋಡೋಕೆ ಎಲ್ಲರೂ ಬನ್ನಿ, ಇಲ್ಲಂದ್ರೆ ನಾನು ದೆವ್ವ ಆಗಿ ಬರ್ತೀನಿ ನೋಡಿ’ ಎಂಬುದಾಗಿ ತನ್ನ ಡೆತ್​ನೋಟ್​ನ ಕೊನೆಯಲ್ಲಿ ಬರೆದುಕೊಂಡಿದ್ದಳು. ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ತೆರೆ ಮೇಲೆ ರಾರಾಜಿಸಲಿದ್ದಾರೆ ‘ಜೂನಿಯರ್’ ಜನಾರ್ದನ ರೆಡ್ಡಿ; ಕಿರೀಟಿ ಹೊಸ ಸಿನಿಮಾ ಟೈಟಲ್​ ಲಾಂಚ್..

ಪಿಎಫ್​​ಐ ಬ್ಯಾನ್​ ‘ಸೆಪ್ಟೆಂಬರ್​ ಕ್ರಾಂತಿ’ ಎಂದು ಬಣ್ಣಿಸಿದ ಅಲೋಕ್ ಕುಮಾರ್​; ಯಾಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
