ಕಲಬುರಗಿ:ಉಗ್ರರು ನಡೆಸಿದ ಗುಂಡಿನ ದಾಳಿಗೆ ಕರ್ನಾಟಕ ಮೂಲದ ಓರ್ವ ಬಿಎಸ್‌ಎಫ್ ಯೋಧ ಹುತಾತ್ಮರಾಗಿರುವ ಘಟನೆ ಭಾರತ-ಬಾಂಗ್ಲಾ ಗಡಿಯಲ್ಲಿರುವ ಧಲಾಯಿ ಪ್ರದೇಶದಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಚಿಂಚನಸೂರ ಗ್ರಾಮದ ಯೋಧ ರಾಜಕುಮಾರ ಎಂ. ಮಾವಿನ್ ಹುತಾತ್ಮರಾಗಿದ್ದಾರೆ. ತ್ರಿಪುರಾ ರಾಜ್ಯದ ಭಾರತ-ಬಾಂಗ್ಲಾ ಗಡಿಯಲ್ಲಿರುವ ಧಲಾಯಿ ಪ್ರದೇಶದಲ್ಲಿ ಯೋಧರು ಗಸ್ತು ತಿರುಗುತ್ತಿರುವಾಗ ಉಗ್ರರಿಂದ ಏಕಾಏಕಿ ಗುಂಡಿನ ದಾಳಿ ನಡೆದಿದೆ.
ಇದನ್ನೂ ಓದಿ:80 ವರ್ಷದ ವೃದ್ಧೆ ಮೇಲೆ ಸಂಬಂಧಿಕನಿಂದಲೇ ನೀಚ ಕೃತ್ಯ
ಈ ವೇಳೆ ಯೋಧ ರಾಜಕುಮಾರ ಎದೆಗೆ ಗುಂಡು ತಗುಲಿ ಗಂಭೀರ ಗಾಯಗೊಂಡು ನಂತರ ಹುತಾತ್ಮರಾಗಿದ್ದಾರೆ. ಯೋಧ ರಾಜಕುಮಾರ ಹುಟ್ಟೂರು ಚಿಂಚನಸೂರು ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುವಾರ ಸ್ವಗ್ರಾಮಕ್ಕೆ ಯೋಧನ ಪಾರ್ಥಿವ ಶರೀರ ಆಗಮಿಸುವ ಸಾಧ್ಯತೆ ಇದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
