ಬೆಂಗಳೂರು:ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಅಕ್ಟೋಬರ್ 4ರಂದು ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕರೊನಾ ಸಾಂಕ್ರಾಮಿಕ ಪ್ರಸರಣದ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸುರಕ್ಷತಾ ಕ್ರಮಗಳನ್ನು ಪರೀಕ್ಷೆ ವೇಳೆ ಅನುಸರಿಸಲಾಗುತ್ತದೆ. ಈ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಭ್ಯರ್ಥಿಗಳು ಪೂರ್ವ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಸಚಿವರು ಹೇಳಿದ್ದಾರೆ.
ಇದನ್ನೂ ಓದಿ;ಇಂಜಿನಿಯರಿಂಗ್​ ಕೋರ್ಸ್​ಗಳಿಗೆ ಸಿಇಟಿ ಶುಲ್ಕ ಎಷ್ಟು? ಹಂಚಿಕೆ ಹೇಗೆ? ಇಲ್ಲಿದೆ ವಿಸ್ತೃತ ಮಾಹಿತಿ
ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ:ರಾಜ್ಯದ ಅವಶ್ಯಕತೆಗಳಿಗೆ ಅನುಗುಣವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸಿಕೊಳ್ಳುವ ಕುರಿತಂತೆ ಸುರೇಶ್​ಕುಮಾರ್ ಸೋಮವಾರ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಪೂರ್ವ ಬಾಲ್ಯಾವಸ್ಥೆಯ ಶಿಕ್ಷಣ, ಮೂಲಸಾಕ್ಷರತೆ ಮತ್ತು ಸಂಖ್ಯಾಜ್ಞಾನ, ಶಾಲೆಯಿಂದ ಹೊರಗುಳಿದ ಮಕ್ಕಳ ಪ್ರಮಾಣ ಕಡಿತಗೊಳಿಸುವುದು, ಶಾಲಾ ಪಠ್ಯಕ್ರಮ ಮಾದರಿ, ಗುಣಮಟ್ಟದ ಶಿಕ್ಷಣ-ಶಿಕ್ಷಕರ ಸೇವೆಗಳು, ಪರಿಣಾಮಕಾರಿ ಆಡಳಿತ ವ್ಯವಸ್ಥೆ, ನಿಯಂತ್ರಣಾ ವ್ಯವಸ್ಥೆ ಸೇರಿ ಶಾಲಾ ಶಿಕ್ಷಣದ ವಿವಿಧ ಘಟ್ಟಗಳು ಎದುರಿಸುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಮೆಟ್ಟಿ ನಿಲ್ಲುವಲ್ಲಿ, ಮುಂದಿನ ಎರಡು ದಶಕಗಳ ಶೈಕ್ಷಣಿಕ ಕ್ಷೇತ್ರದ ಅವಕಾಶಗಳನ್ನು ಗಮನದಲ್ಲಿಟ್ಟುಕೊಂಡು ಸಮಗ್ರ ನೀತಿ ನಿರೂಪಣೆಗೆ ಮುಂದಾಗಬೇಕೆಂದು ಸುರೇಶ್ ಕುಮಾರ್ ಹೇಳಿದರು.
https://www.vijayavani.net/toilets-liquor-shops-built-atop-demolished-masjid-in-china/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + sixteen =
Remember me
