ಮಡಿಕೇರಿ:ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವವು ಇದೇ ತಿಂಗಳ 17ರಂದು ಬೆಳಗ್ಗೆ 7.03ರಂದು ನಡೆಯಲಿದ್ದು, ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಕೋವಿಡ್ ಸೋಂಕು ಹೆಚ್ಚಾಗಿರುವ ಕಾರಣ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅರ್ಚಕರು, ಜನಪ್ರತಿನಿಧಿಗಳು, ವ್ಯವಸ್ಥಾಪನಾ ಸಮಿತಿಯವರು ಸೇರಿ 55 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಇವರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಬರಬೇಕು. ತೀರ್ಥೋದ್ಭವ ಆದ ಮೇಲೆ ಕ್ಷೇತ್ರಕ್ಕೆ ತೆರಳಲು ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತದೆ. ಈ ವೇಳೆ ಭಕ್ತರು ಕಡ್ಡಾಯವಾಗಿ ಕೋವಿಡ್ ತಡೆ ಮಾರ್ಗಸೂಚಿ ಪಾಲಿಸಲೇ ಬೇಕು.
ಇದನ್ನೂ ಓದಿ:ಹಾಲಿನ ವ್ಯಾನಲ್ಲಿ ಗೋಮಾಂಸ ಸಾಗಾಟ: ಪತ್ತೆ ಮಾಡಿದ್ರು ಬಜರಂಗ ದಳದ ಕಾರ್ಯಕರ್ತರು
ಉಸ್ತುವಾರಿ ಸಚಿವರು, ಶಾಸಕರು, ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದ ಬಳಿಕ ಈ ತೀರ್ಮಾನಕ್ಕೆ ಬರಲಾಗಿದೆ. ಈ ಹಿಂದಿನ ಹಬ್ಬಹರಿದಿನ ಸಂದರ್ಭದಲ್ಲಿ ಸಾರ್ವಜನಿಕರು ಸಹಕಾರ ನೀಡಿದ್ದಾರೆ. ಅದೇ ರೀತಿ ಕಾವೇರಿ ಜಾತ್ರೆ, ದಸರಾ ಸಂದರ್ಭದಲ್ಲಿ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಇದನ್ನೂ ಓದಿ:ಪ್ರಧಾನಿ ಮೋದಿ ಜೀವನಚರಿತ್ರೆಯ ಸಿನಿಮಾದ​ ಸಹ ನಿರ್ಮಾಪಕರಿಗೆ ಜೀವ ಬೆದರಿಕೆ
ಮಡಿಕೇರಿ, ಗೋಣಿಕೊಪ್ಪ ದಸರಾ ಸಂದರ್ಭದಲ್ಲಿಯೂ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕೇವಲ ಸಾಂಪ್ರದಾಯಿಕ ಆಚರಣೆಗೆ ಅವಕಾಶ ನೀಡಲಾಗುತ್ತದೆ. ದಶಮಂಟಪ ಮೆರವಣಿಗೆಗೆ ಅವಕಾಶವಿಲ್ಲ. ಕರಗ ಮತ್ತು ಕಲಶ ಹೊತ್ತು ಸಾಗುವವರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಕೊಳ್ಳಬೇಕೆಂದರು. ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಗೋಷ್ಠಿಯಲ್ಲಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
