ಬೆಂಗಳೂರು:ಕರ್ನಾಟಕ ಏಕೀಕರಣದ ಹೋರಾಟಗಾರ, ಹಿರಿಯ ಸಾಹಿತಿ ನಾಡೋಜ ಡಾ.ಕಯ್ಯರ ಕಿಞ್ಞಣ್ಣ ರೈ ಅವರ 109ನೇ ಜನ್ಮ ದಿನಾಚರಣೆಯನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಗುರುವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ.ಕೆ ಧರಣೀದೇವಿ ಮಾಲಗತ್ತಿ, ಕಿಞ್ಞಣ್ಣ ರೈ ಅವರ ಕವನ ಸಂಕಲನಗಳಲ್ಲಿ ಪ್ರಮುಖವಾದ ಶ್ರೀಮುಖ ಐಕ್ಯಗಾನ, ಮಕ್ಕಳ ಸಾಹಿತ್ಯ ಕೃತಿಗಳ ಬಗ್ಗೆ ವಿವರಿಸಿದರು. ಪತ್ರಕರ್ತರಾಗಿ, ಶಿಕ್ಷಕರಾಗಿ, ಹೋರಾಟಗಾರರಾಗಿ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಮಾಡಿದ ಸೇವೆ ಅನುಕರಣಾರ್ಹ ಎಂದು ಅವರು ವಿವರಿಸಿದರು.
ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ಜಾಣಗೆರೆ ವೆಂಕಟರಾಮಯ್ಯ, ಅಶೋಕ ಚಂದರಗಿ, ಭಗತ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − eleven =
Remember me
