ಬೆಂಗಳೂರು:ಟಿಪ್ಪು ಎಕ್ಸ್​ಪ್ರೆಸ್​ ಇನ್ನಿಲ್ಲ. ಏಕೆಂದರೆ ಮೈಸೂರು-ಬೆಂಗಳೂರು ಟಿಪ್ಪು ಎಕ್ಸ್​ಪ್ರೆಸ್​ಗೆ ಹೊಸ ನಾಮಕರಣವಾಗಿದ್ದು, ಅಧಿಕೃತ ಆದೇಶವೂ ಹೊರಬಿದ್ದಿದೆ. ರಾಜ್ಯದ ಎರಡು ರೈಲುಗಳ ಹೆಸರನ್ನ ಬದಲಾಯಿಸಲಾಗಿದೆ.
ಮೈಸೂರು-ಬೆಂಗಳೂರು ಟಿಪ್ಪು ಎಕ್ಸ್​ಪ್ರೆಸ್​ ರೈಲಿಗೆ ಹೊಸದಾಗಿ ಒಡೆಯರ್ ಎಕ್ಸ್​ಪ್ರೆಸ್ ಎಂದು ಹೆಸರಿಡಲಾಗಿದೆ. ಮೈಸೂರು-ತಾಳಗುಪ್ಪ ಎಕ್ಸ್​ಪ್ರೆಸ್​ ರೈಲಿಗೆ ಕುವೆಂಪು ಎಕ್ಸ್​ಪ್ರೆಸ್​ ಎಂದು ಮರು ನಾಮಕರಣ ಮಾಡಲಾಗಿದೆ. ಈ ಕುರಿತು ರೈಲ್ವೆ ಇಲಾಖೆ ಇಂದು ಆದೇಶ ಹೊರಡಿಸಿದೆ.
ಇದನ್ನೂ ಓದಿ:ಟಿಪ್ಪು ಎಕ್ಸ್​ಪ್ರೆಸ್ ರೈಲಿನ ಹೆಸರು ಬದಲಾವಣೆ ಮಾಡ್ತೀವಿ: ಪ್ರತಾಪ್​ ಸಿಂಹ
ಟಿಪ್ಪು ಎಕ್ಸ್​ಪ್ರೆಸ್​ ಹೆಸರು ಬದಲಾವಣೆಗೆ ಬಹಳಷ್ಟು ಜನರು ಬೇಡಿಕೆ ಇರಿಸಿದ್ದು, ಆ ಹೆಸರನ್ನು ಬದಲಾಯಿಸುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿದ್ದರು. ಹೆಸರನ್ನು ಬದಲಿಸಿದ ಹಿನ್ನೆಲೆಯಲ್ಲಿ ರೈಲ್ವೆ ಸಚಿವ ಅಶ್ವಿನ್​ ವೈಷ್ಣವ್ ಅವರಿಗೆ ಹಾಗೂ ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಧನ್ಯವಾದ ಎಂದು ಪ್ರತಾಪ್ ಸಿಂಹ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

ವಾಟ್ಸ್​ಆ್ಯಪ್​ ಬಳಕೆ ಅಪಾಯಕಾರಿಯೇ?; ಇಲ್ಲಿದೆ ಆತಂಕಕಾರಿ ಮಾಹಿತಿ!
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:fourteen + one =
Remember me
