ಬೆಂಗಳೂರು:ಬಾಳೆಹೊನ್ನೂರಿನ ಶ್ರೀರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ 22ನೇ ವರ್ಷದ ಆಷಾಡ ಮಾಸದ ಪೂಜಾನುಷ್ಠಾನ ಮತ್ತು ಧರ್ಮೋತ್ತೇಜಕ ಸಂಗಮ ಸಮಾವೇಶವು ಬೆಂಗಳೂರಿನಲ್ಲಿ ಜು.24 ರಿಂದ ನಡೆಯಲಿದೆ.
ಜು.23ಕ್ಕೆ ಪುರಪ್ರವೇಶ ಮಾಡಲಿರುವ ಶ್ರೀರಂಭಾಪುರಿ ಜಗದ್ಗುರುಗಳನ್ನು ಭವ್ಯ ಸಾರೋಟು ಮೆರವಣಿಗೆ ಮೂಲಕ ಸಮಾರಂಭ ನಡೆಯುವ ಸಭಾಂಗಣಕ್ಕೆ ಕರೆತರಲಾಗುವುದು. ಜು.24 ರಿಂದ 26ರವರೆಗೆ ವಿಜಯನಗರದ ಶ್ರೀಬಸವೇಶ್ವರ ಸುಜ್ಞಾನ ಮಂಟಪದಲ್ಲಿ, ಜು.27ರಂದು ಜೆ.ಪಿ.ನಗರದ ಪುಟ್ಟೇನಹಳ್ಳಿ ಶ್ರೀಸೋಮೇಶ್ವರ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀಮದ್ವೀರಶೈವ ಸದ್ಭೋದನ ಸಂಸ್ಥೆಯ ಬೆಂಗಳೂರು ಘಟಕದ ಅಧ್ಯಕ್ಷ ಬೀರೂರು ಶಿವಸ್ವಾಮಿ ತಿಳಿಸಿದ್ದಾರೆ.
ಪ್ರತಿದಿನ ಬೆಳಗ್ಗೆ 8 ಗಂಟೆಗೆಯಿಂದ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ ನಡೆಯಲಿದೆ. ಸಂಜೆ 6 ಗಂಟೆಯಿಂದ ಧಮೋತ್ತೇಜಕ ಸಂಗಮ ಸಮಾವೇಶ ನಡೆಯಲಿದೆ. ಕಾರ್ಯಕ್ರಮದಲ್ಲಿ ಎಡೆಯೂರು, ಸಿದ್ಧರಬೆಟ್ಟ, ದೊಡ್ಡಗುಣಿ, ಕಲ್ಲುಬಾಳು, ರಾಜಾಪುರ, ನಾಗಲಾಪುರದ ಶ್ರೀಗಳು,ಅವಧೂತ ವಿನಯ ಗುರೂಜಿ ಭಾಗವಹಿಸಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವರಾ ವಿ.ಸೋಮಣ್ಣ, ಶೋಭಾ ಕರಂದ್ಲಾಜೆ ಸೇರಿದಂತೆ ವಿವಿಧ ಮುಖಂಡರು, ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆಂದು ಪ್ರಧಾನ ಕಾರ್ಯದರ್ಶಿ ಆರ್.ಆರ್.ಹಿರೇಮಠ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
