ಕೊಡಗು:ಇಡೀ ಕರ್ನಾಟಕವನ್ನೇ ಬೆಚ್ಚಿಬೀಳಿಸೋ ಕೊಡಗಿನ ಸೋಮವಾರಪೇಟೆಯ ಸೂರ್ಲಬ್ಬಿ ಗ್ರಾಮದಲ್ಲಿ 16 ವರ್ಷ ವಯಸ್ಸಿನ ಬಾಲಕಿಯನ್ನು ಕೊಂದು ಆಕೆಯ ತಲೆಯೊಂದಿಗೆ ಪರಾರಾರಿಯಾಗಿದ್ದ ಆರೋಪಿ ಮೊನ್ನಂಡ ಪ್ರಕಾಶ್​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುದ್ದಿ ಸುಳ್ಳು ಎಂದು ಕೊಡಗು ಜಿಲ್ಲಾ ವರಿಷ್ಠಾಧಿಕಾರಿ ಕೆ.ರಾಮರಾಜನ್​ ತಿಳಿಸಿದ್ದಾರೆ.
ಇದನ್ನೂ ಓದಿ:ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸರ ವಶಕ್ಕೆ!
ಆರೋಪಿ ಮೊನ್ನಂಡ ಪ್ರಕಾಶ್​ ಅರಣ್ಯದಲ್ಲಿ ತಲೆಮರೆಸಿಕೊಂಡಿದ್ದು, ಆ ಭಾಗದಲ್ಲಿ ನೆಟ್‍ವರ್ಕ್ ಇಲ್ಲದ ಕಾರಣ ತಪ್ಪು ಮಾಹಿತಿ ಹರಿದಾಡಿದೆ. ಪೊಲೀಸರಿಗೆ ಆತ್ಮಹತ್ಯೆ ಮಾಡಿಕೊಂಡ ಮಾಹಿತಿ ಬಂದಿತ್ತು. ಸ್ಥಳಕ್ಕೆ ಭೇಟಿ ನೀಡಿದಾಗ ಈ ಬಗ್ಗೆ ಹುಡುಕಾಟ ನಡೆಸಿದರೂ ಮೃತದೇಹ ಪತ್ತೆಯಾಗಿಲ್ಲ. ಯಾರೋ ಸ್ಥಳೀಯರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಎಸ್ಪಿ ಸ್ಪಷ್ಟನೆ ನೀಡಿದ್ದಾರೆ.
16 ವರ್ಷದ ಬಾಲಕಿಗೂ 35 ವರ್ಷದ ಆರೋಪಿಗೂ ಮದುವೆ ಮಾಡಿಸಲು ಪೋಷಕರು ನಿರ್ಧರಿಸಿದ್ದರು. ಗುರುವಾರವಷ್ಟೇ ಇಬ್ಬರ ಮದುವೆ ನಿಶ್ಚಿತಾರ್ಥ ಕೂಡ ನಡೆದಿತ್ತು. ಈ ಬಗ್ಗೆ ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಅವರನ್ನು ತಡೆದಿದ್ದರು. ಬಾಲ್ಯ ವಿವಾಹ ಮಾಡದಂತೆ ಪೋಷಕರ ಮನವೊಲಿಸಿದ್ದರು.
18 ವರ್ಷ ತುಂಬಿದ ಬಳಿಕ ನಂತರವೇ ಮದುವೆ ಮಾಡಿಸುವುದಾಗಿ ಮುಚ್ಚಳಿಕೆಯನ್ನು ಬರೆಸಿಕೊಂಡು ಅಧಿಕಾರಿಗಳು ವಾಪಸ್ಸಾಗಿದ್ದರು. ನಂತರ ಮನೆಗೆ ಬಂದ ಆರೋಪಿಯು ಬಾಲಕಿಯನ್ನು ಕಾಡಿಗೆ ಕರೆದುಕೊಂಡು ಹೋಗಿ ತಲೆ ಕತ್ತರಿಸಿ ಪರಾರಿಯಾಗಿದ್ದ. ಆದರೆ ಜಿಲ್ಲಾ ವರಿಷ್ಠಾಧಿಕಾರಿ ಕೆ.ರಾಮರಾಜನ್​ ಅವರು ಈ ವಿಷಯವನ್ನು ಖಚಿತಪಡಿಸಿಲ್ಲ.
ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸರ ವಶಕ್ಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − nine =
Remember me
