ಬೆಂಗಳೂರು:ರಾಜ್ಯ ಸರ್ಕಾರದ ಆದೇಶಾನುಸಾರ 2008ರಲ್ಲಿ ಖಾಯಂಗೊಂಡ ನಿವೃತ್ತ ಶಿಕ್ಷಕೇತರ ನೌಕರರಿಗೆ ನಿವೃತ್ತಿ ನಂತರದ ಸೌಲಭ್ಯಗಳನ್ನು ಮಂಜೂರು ಮಾಡುವಂತೆ ಬೆಂಗಳೂರು ವಿಶ್ವವಿದ್ಯಾಲಯದ ಶಿಕ್ಷಕೇತರ ಸಂಘ ವಿವಿಯ ಅಧಿಕಾರಿಗಳನ್ನು ಒತ್ತಾಯಿಸಿದೆ.
ಈ ಸಂಬಂಧ ಕುಲಸಚಿವರಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಪಿ.ಶಿವಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಯೋಗೇಶ್, ಬೆಂಗಳೂರು ವಿವಿಯಲ್ಲಿ 2008ನೇ ಇಸವಿಯಲ್ಲಿ ಸುಮಾರು 85 ಜನ ಶಿಕ್ಷಕೇತರ ನೌಕರರ ಸೇವೆ ಖಾಯಂಗೊಂಡಿದ್ದು, ಇವರಲ್ಲಿ ಹಲವಾರು ಜನ ವಯೋನಿವೃತ್ತಿ ಪಡೆದಿದ್ದಾರೆ. ಇವರುಗಳಿಗೆ ನೂತನ ಪಿಂಚಣಿ ಯೋಜನೆಯಡಿ ನೀಡಬೇಕಾದ ನಿವೃತ್ತಿ ನಂತರದ ಸೌಲಭ್ಯಗಳು ಸರಿಯಾಗಿ ದೊರೆಯದೆ ಸಮಸ್ಯೆ ಅನುಭವಿಸುತ್ತಿದ್ದಾರೆ.
2022ರ ಸರ್ಕಾರಿ ಆದೇಶದಂತೆ ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯಗಳು ದೊರೆಯದೆ ಅನ್ಯಾಯವಾಗುತ್ತಿದೆ. ಹಾಗಾಗಿ ಕೂಡಲೇ ಈ ಬಗ್ಗೆ ಗಮನ ಹರಿಸಿ ಸರ್ಕಾರದ ಆದೇಶಾನುಸಾರ ಸಂಬಂಧಿಸಿದ ಎಲ್ಲ ನಿವೃತ್ತ ನೌಕರರಿಗೂ ನಿವೃತ್ತಿ ನಂತರದ ಸೌಲಭ್ಯಗಳನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಕೋರಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:14 + 9 =
Remember me
