ಬೆಂಗಳೂರು:ರಾಜ್ಯದಲ್ಲಿ 6 ಮತ್ತು 7ನೇ ತರಗತಿಗೆ ಆನ್‌ಲೈನ್‌ ಶಿಕ್ಷಣ ರದ್ದು ಮಾಡಲಾಗಿದೆ ಎಂಬ ಸುದ್ದಿ ಬಂದ ಬೆನ್ನಲ್ಲೇ.. ಅಂತಹ ಯಾವುದೇ ಅಧಿಕೃತ ತೀರ್ಮಾನ ಆಗಿಲ್ಲ ಎಂಬ ಮತ್ತೊಂದು ಹೇಳಿಕೆ ಹೊರಬಿದ್ದಿದೆ. ಪರಿಣಾಮ ವಿದ್ಯಾರ್ಥಿಗಳು ಮತ್ತು ಪಾಲಕರು ಗೊಂದಲದಲ್ಲಿ ಸಿಲುಕಿದ್ದು, ಈ ಕುರಿತು ಸ್ವತಃ ಶಿಕ್ಷಣ ಸಚಿವರೇ ನೀಡಿರುವ ಸ್ಪಷ್ಟನೆ ಇಲ್ಲಿದೆ ನೋಡಿ.
ಇದನ್ನೂ ಓದಿರಿರಾತ್ರೋರಾತ್ರಿ ಕುಸಿದ ದೇವಾಲಯ ಗೋಪುರ! ಇದು ಅಪಾಯದ ಮುನ್ಸೂಚನೆಯೇ..?
ಇಂದು(ಗುರುವಾರ) ಕ್ಯಾಬಿನೆಟ್‌ ಸಭೆಯ ಬಳಿಕ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಮಾಧುಸ್ವಾಮಿ, ಸಂಪುಟ ಸಭೆಯಲ್ಲಿ ಆನ್‌ಲೈನ್‌ ತರಗತಿಯ ಬಗ್ಗೆ ಚರ್ಚೆ ನಡೆಯಿತು. 7ನೇ ತರಗತಿವರೆಗಿನ ಆನ್‌ಲೈನ್‌ ಶಿಕ್ಷಣವನ್ನು ರದ್ದು ಮಾಡುವಂತೆ ಸಚಿವರು ಒತ್ತಾಯಿಸಿದರು. ಹೀಗಾಗಿ ಎಲ್ಲ ಮಾದರಿಯ ಪಠ್ಯ ಬೋಧಿಸುತ್ತಿರುವ ಶಾಲೆಗಳ ಆನ್​ಲೈನ್​ ಕ್ಲಾಸ್​ಗಳನ್ನು ರದ್ದು ಮಾಡಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದರು. ಇದಾದ ಕೆಲವೇ ಸಮಯದಲ್ಲಿ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವರು, ಇಂತಹ ತೀರ್ಮಾನವೇ ಆಗಿಲ್ಲ ಎಂದಿದ್ದಾರೆ.
ಇದನ್ನೂ ಓದಿರಿಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯುವ ದಿನ ಲಾಕ್​ಡೌನ್​..! ಹೀಗಂತ ಮಾಜಿ ಶಿಕ್ಷಣ ಸಚಿವರು ಹೇಳಿದ್ದೇಕೆ?
ಮಾಧುಸ್ವಾಮಿಯ ಎಡವಟ್ಟಿನ ಬಳಿಕ ಸ್ಪಷ್ಟನೆ ನೀಡಿರುವ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌, ‘ಕರ್ನಾಟಕ ಸರ್ಕಾರ ಎಲ್‌ಕೆಜಿ, ಯುಕೆಜಿ, 1 ರಿಂದ 5ನೇ ತರಗತಿವರೆಗಿನ ಆನ್‌ಲೈನ್‌ ಶಿಕ್ಷಣವನ್ನು ರದ್ದು ಮಾಡಿದೆ. 6 ಮತ್ತು 7ನೇ ತರಗತಿವರೆಗಿನ ಆನ್‌ಲೈನ್‌ ಶಿಕ್ಷಣವನ್ನು ರದ್ದು ಮಾಡಬೇಕು ಎಂದು ಕೆಲ ಸಚಿವರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಇದನ್ನು ರದ್ದು ಪಡಿಸುವ ಬಗ್ಗೆ ಸರ್ಕಾರ ಅಧಿಕೃತವಾಗಿ ಯಾವುದೇ ನಿರ್ಧಾರ ಕೈಗೊಂಡಿಲ್ಲ’ ಎಂದು ಟ್ವೀಟ್​ ಮಾಡಿದ್ದಾರೆ.
ಇನ್ನು 6 ಮತ್ತು 7ನೇ ತರಗತಿಗೆ ಆನ್‌ಲೈನ್‌ ಶಿಕ್ಷಣ ರದ್ದು ಸಂಬಂಧ ಸರ್ಕಾರ ನಿರ್ಧಾರ ಪ್ರಕಟಿಸಿಲ್ಲ. 6ರಿಂದ 10ನೇ ತರಗತಿವರೆಗೆ ಆನ್‌ಲೈನ್ ಶಿಕ್ಷಣದ ಸಾಧಕ-ಬಾಧಕಗಳ ಕುರಿತು ವರದಿ ಸಲ್ಲಿಸಲು ಸಮಿತಿ ರಚಿಸಲಾಗಿದೆ. ಸಮಿತಿಯು 10 ದಿನಗಳಲ್ಲಿ ವರದಿ ಸಲ್ಲಿಸಲಿದ್ದು, ಆ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿರಿರಾಜ್ಯದಲ್ಲಿ 6 ಮತ್ತು 7ನೇ ತರಗತಿ ಮಕ್ಕಳಿಗೂ ಆನ್​ಲೈನ್​​ ಕ್ಲಾಸ್​ ರದ್ದು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − five =
Remember me
