ಹುಬ್ಬಳ್ಳಿ:ಗಣೇಶ ಹಬ್ಬದ ವೇಳೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಮತ್ತೊಂದು ಕೊಡುಗೆ ನೀಡಿದೆ. ಅದೇ ವಂದೇ ಭಾರತ್ ರೈಲು! ಹಬ್ಬಕ್ಕೂ ಮುನ್ನ ರೈತರಿಗೆ ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿಗೆ ಬೆಂಬಲ ಬೆಲೆ ಕೊಡುಗೆ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರದ ಮತ್ತೊಂದು ಗಿಫ್ಟ್ ನೀಡಿದೆ.
ಇದನ್ನೂ ಓದಿ:ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಮತ್ತೆ ನಿರಾಳ; ಸೆ.12ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪ್ರಸ್ತಾವನೆಗೆ ಸ್ಪಂದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹುಬ್ಬಳ್ಳಿ-ಪುಣೆ ಮಧ್ಯೆ ಎರಡನೇ ವಂದೇ ಭಾರತ್ ರೈಲು ಆರಂಭಿಸುವ ಶುಭ ಸಂದೇಶ ನೀಡಿದ್ದಾರೆ.  ಅತಿ ಶೀಘ್ರದಲ್ಲೇ ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮಾಹಿತಿ ನೀಡಿದ್ದಾರೆ.
ವಂದೇ ಭಾರತ್ ಗೆ ಮನವಿ ಮಾಡಿದ್ದರು ಜೋಶಿ:ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹುಬ್ಬಳ್ಳಿ- ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಅಶ್ವಿನಿ ವೈಷ್ಣವ್ ಅವರಿಗೆ ಜುಲೈ ಮೊದಲ ವಾರದಲ್ಲಷ್ಟೇ ಪತ್ರ ಬರೆದು ಮನವಿ ಮಾಡಿದ್ದರು. ರಾಜ್ಯದಲ್ಲಿ ಬೆಂಗಳೂರು ನಂತರ ಪ್ರಮುಖ ವಾಣಿಜ್ಯ ನಗರಿ ಎಂಬ ಹೆಗ್ಗಳಿಕೆ ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕಿದೆ. ಅಲ್ಲದೇ, ವಂದೇ ಭಾರತ್ ರೈಲು ಸಂಚಾರದಿಂದ ಈ ಭಾಗದ ವಾಣಿಜ್ಯೋದ್ಯಮ, ಕೈಗಾರಿಕಾ ವಸಾಹತು ಬೆಳವಣಿಗೆಗೆ ಅನುಕೂಲ ಆಗುತ್ತದೆ ಎಂದು ಸಚಿವ ಜೋಶಿ ಕೇಂದ್ರದ ಗಮನ ಸೆಳೆದಿದ್ದರು.
ಹುಬ್ಬಳ್ಳಿಯಿಂದ ಮುಂಬೈ ಸಂಪರ್ಕಕ್ಕೂ ಈ ಮಾರ್ಗ ಅತ್ಯಂತ ಪ್ರಮುಖವಾಗಲಿದೆ ಎಂಬುದನ್ನು ಜೋಶಿ ಅವರು ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟು ವಂದೇ ಭಾರತ್ ರೈಲು ಸಂಚಾರ ಆರಂಭಕ್ಕೆ ಒತ್ತಾಯಿಸಿದ್ದರು. ಹುಬ್ಬಳ್ಳಿ-ಧಾರವಾಡದ ಜನರಿಗೆ ಹಬ್ಬದ ಈ ಶುಭ ಸಂದರ್ಭದಲ್ಲಿ ವಂದೇ ಭಾರತ್ ರೈಲು ಸಂಚಾರ ಸಿಹಿ ಸುದ್ದಿಯಾಗಿದ್ದು, ಶೀಘ್ರದಲ್ಲಿಯೇ ಹುಬ್ಬಳ್ಳಿ- ಪುಣೆ ನಡುವೆ ಹುಬ್ಬಳ್ಳಿಯ ಎರಡನೇಯ ವಂದೇ ಭಾರತ್ ಎಕ್ಸಪ್ರೆಸ್ ರೈಲು ಸಂಚರಿಸಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ.
ಉದ್ಘಾಟನೆ ದಿನ, ವೇಳಾಪಟ್ಟಿ ಶೀಘ್ರ ಪ್ರಕಟ:ವಂದೇ ಭಾರತ್ ರೈಲು ಸಂಚಾರದ ಉದ್ಘಾಟನೆ ದಿನ ಮತ್ತು ವೇಳಾ ಪಟ್ಟಿಯನ್ನು ರೈಲ್ವೆ ಇಲಾಖೆ ಆದಷ್ಟು ಬೇಗ ಪ್ರಕಟಿಸಲಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.
ಪ್ರಧಾನಿಗೆ, ರೈಲ್ವೆ ಸಚಿವರಿಗೆ ಜೋಶಿ ಧನ್ಯವಾದ:ನಮ್ಮ ವಿಭಾಗದ ರೈಲ್ವೆ ಅಭಿವೃದ್ಧಿಗೆ, ವಿಕಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಮೂಲಕ ಮಹತ್ವದ ಕೊಡುಗೆ ನೀಡಿದ್ದು, ಉತ್ತರ ಕರ್ನಾಟಕ ಜನರ ಪರವಾಗಿ ಧನ್ಯವಾದ ಅರ್ಪಿಸುವೆ ಎಂದಿದ್ದಾರೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ.
ಉಪನಗರ ರೈಲು ಯೋಜನೆ: 2026ರ ಡಿಸೆಂಬರ್‌ಗೆ ಕಾರಿಡಾರ್‌ 2,4 ಪೂರ್ಣ: ಕೇಂದ್ರ ಸಚಿವ ವಿ ಸೋಮಣ್ಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
