ಬೆಂಗಳೂರು: ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ೋಷಣೆಗಳನ್ನು ಮಾಡಿದ್ದಾರೆ.
ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಮಂಗಳವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು. ಪೊಲೀಸ್ ಸಿಬ್ಬಂದಿಗೆ ನೀಡಲಾಗುತ್ತಿರುವ ವೈದ್ಯಕೀಯ ತಪಾಸಣೆ ಭತ್ಯೆ ೧೦೦೦ ರೂ.ನಿಂದ ೧೫೦೦ ರೂ.ಗೆ ಹೆಚ್ಚಿಸಲಾಗುವುದು. ಸಿಇಎನ್ ಠಾಣಾಧಿಕಾರಿಗಳ ಹುದ್ದೆಯನ್ನು ಎಸಿಪಿ/ ಡಿವೈಎಸ್‌ಪಿ ಹುದ್ದೆಗೆ ಮೇಲ್ದರ್ಜೆಗೇರಿಸಲಾಗುವುದು. ಬೆಂಗಳೂರು ನಗರದ 8 ಡಿಸಿಪಿ ವಲಯಗಳಿಗೆ ಅಡಿಷನಲ್ ಡಿಸಿಪಿ ಹುದ್ದೆ ಸೃಜಿಸಲಾಗುವುದು. ಇಂಟಲಿಜೆನ್ಸ್‌ನಲ್ಲಿ ಟ್ರೈನಿಂಗ್ ಮತ್ತು ಪ್ರತ್ಯೇಕ ನೇಮಕಾತಿ ಸೇರಿ ಇತರೆ ಪ್ರಮುಖ ಮಹತ್ವದ ೋಷಣೆ ಮಾಡಿದ್ದಾರೆ.
ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ:ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ. ದಲಿತರು, ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಈ ಹಿಂದೆ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಇತ್ತು. ೨೦೨೩ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅದು ಸ್ವಲ್ಪ ಮಟ್ಟಗೆ ಸುಧಾರಿಸಿದೆ. ರಾಷ್ಟ್ರಮಟ್ಟದಲ್ಲಿ ಈ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಶೇ.೩೩ರಷ್ಟಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಶೇ.೩೩ಕ್ಕೂ ಅಧಿಕ ಗುರಿ ಸಾಧಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ರಾಜ್ಯದಲ್ಲಿ ಭಯದ ವಾತಾವರಣದಲ್ಲಿ ಇರಬಾರದು. ಶೋಷಣೆಗೊಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾನಿಕವಾಗಿರುವ ಸಮರ್ಥ ಆರೋಪ ಪಟ್ಟಿ ಸಲ್ಲಿಸಬೇಕು. ತನಿಖೆ ವೇಳೆ ದೋಷಾರೋಪಪಟ್ಟಿ ಸಲ್ಲಿಸುವುದು ವಿಳಂಬವಾದರೆ, ಶಿಕ್ಷೆ ಪ್ರಮಾಣ ಕಡಿಮೆಯಾಗುತ್ತದೆ. ಈ ದೌರ್ಜನ್ಯ ಪ್ರಕರಣಗಳಲ್ಲಿ ೬೦ ದಿನಗಳೊಳಗೆ ತನಿಖೆ ನಡೆಸಿ ದೋಷಾರೋಪಪಟ್ಟಿ ಸಲ್ಲಿಸಬೇಕು. ಇಂತಹ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದ ಹೆಚ್ಚಾದರೆ, ಅಪರಾಧಗಳು ಇಳಿಮುಖವಾಗುತ್ತವೆ ಎಂದು ತಿಳಿಸಿದರು.
ದುರ್ಬಲ ವರ್ಗಗಳಿಗೆ ರಕ್ಷಣೆ ಕೊಡಬೇಕು:ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಚೆನ್ನಾಗಿದ್ದರೆ ರಾಜ್ಯ ಅಭಿವೃದ್ಧಿಯಾಗುತ್ತದೆ. ಅಂದರೆ, ಬಂಡವಾಳ ಹೂಡಿಕೆ ಹೆಚ್ಚಾಗುತ್ತದೆ. ಬಂಡವಾಳ ಹೂಡಿಕೆ ಹೆಚ್ಚಾದರೆ ಉದ್ಯೋಗ ಸೃಷ್ಟಿಯಾಗುತ್ತದೆ. ಉದ್ಯೋಗ ಸೃಷ್ಟಿ ಹೆಚ್ಚಾದರೆ ರಾಜ್ಯದ ಆರ್ಥಿಕ ಬೆಳವಣಿಗೆ ಉತ್ತಮವಾಗುತ್ತದೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕು. ಪ/ಜಾ ಪ/ಪ, ಮಹಿಳೆಯರು ಸೇರಿದಂತೆ ದುರ್ಬಲ ವರ್ಗಗಳಿಗೆ ರಕ್ಷಣೆ ಕೊಡಬೇಕು ಎಂದು ಸೂಚಿಸಿದ್ದೇನೆ ಎಂದರು.
ಸೈಬರ್ ಅಪರಾಧಕ್ಕೆ ಕಡಿವಾಣ ಹಾಕಿ:ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯ ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಪ್ರಯತ್ನ ಹೆಚ್ಚು ಮಾಡಿದ್ದಾರೆ. ಇದು ಸಮಾಧಾನಕರವಾಗಿದೆ. ಸಣ್ಣಪುಟ್ಟ ಗಲಾಟೆ ಹೊರತಾಗಿ ಯಾವುದೇ ಕೋಮು-ಗಲಭೆಗಳು ನಡೆದಿಲ್ಲ. ಇತ್ತೀಚೆಗೆ ಸೈಬರ್ ಕ್ರೈಂ ಅಪರಾಧಗಳು ಹೆಚ್ಚಾಗುತ್ತಿವೆ. ಹೀಗಾಗಿ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸೈಬರ್ ಕ್ರೈಂ ವಿಭಾಗ ಬಲಪಡಿಸುವಂತೆ ಸೂಚಿಸಿದ್ದೇನೆ. ಆಧುನಿಕ ಉಪಕರಣಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಯಂತ್ರಿಸಬೇಕು. ಅಪರಾಧಿಗಳಿಗೆ ಶಿಕ್ಷೆ ಕೊಡಿಸಬೇಕು ಎಂದು ನುಡಿದರು.ಚುನಾವಣೆ ಇರುವುದರಿಂದ ನಿಗಾ ಇಡಿ:ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಗಸ್ತು ಪೊಲೀಸ್ ಹೆಚ್ಚಿಸಬೇಕು. ಗಸ್ತು ಪೊಲೀಸರು ಮೇಲಾಧಿಕಾರಿಗಳಿಗೆ ವರದಿ ಮಾಡಿಕೊಳ್ಳಬೇಕು. ಹಗಲು-ರಾತ್ರಿ ವೇಳೆ ಅಪರಾಧಗಳು ನಡೆಯದಂತೆ ನೋಡಿಕೊಳ್ಳಬೇಕು ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರೌಡಿಗಳು, ಅಪರಾಧ ಹಿನ್ನೆಲೆವುಳ್ಳವರ ಮೇಲೆ ತೀವ್ರ ನಿಗಾವಹಿಸಬೇಕು. ಕೋಮು-ಸಂಘರ್ಷಗಳು ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದೇನೆ ಎಂದು ತಿಳಿಸಿದರು.
೨೭ ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ:ಕರ್ನಾಟಕವನ್ನು ಮಾದಕವಸ್ತು ಮುಕ್ತ ರಾಜ್ಯ ಮಾಡಬೇಕು. ಕಳೆದ ಆರು ತಿಂಗಳಲ್ಲಿ ರಾಜ್ಯದ ವಿವಿಧೆಡೆ ದಾಳಿ ನಡೆಸಿ ೨೭ ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ ಮಾಡಿದ್ದಾರೆ. ಅದರಲ್ಲಿ ೪,೪೮೪ ಕೆ.ಜಿ.ಗಾಂಜಾ, ಮತ್ತು ೨೩ ಕೆ.ಜಿ.ರಾಸಾಯನಿಕ ಮಾದಕವಸ್ತುಗಳಿವೆ. ಈ ಮಾದಕ ವಸ್ತುಗಳನ್ನು ಫೆಬ್ರವರಿ ಮೊದಲ ವಾರದಲ್ಲಿ ನಾಶಗೊಳಿಸಲು ಅನುಮತಿ ನೀಡಲಾಗಿದೆ ಎಂದರು.ಇನ್ನು ಕೇಂದ್ರ ಸರ್ಕಾರಕ್ಕೆ ರಾಜ್ಯದ ೨೬ ಐಪಿಎಸ್ ಅಧಿಕಾರಿಗಳನ್ನು ಬಲವಂತವಾಗಿ ಕೇಂದ್ರ ಸೇವೆಗೆ ಶಿಫಾರಸ್ಸು ಮಾಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ, ಕೇಂದ್ರ ಸರ್ಕಾರದ ಮನವಿ ಮೇರೆಗೆ ರಾಜ್ಯದ ಐಪಿಎಸ್ ಅಧಿಕಾರಿಗಳ ಪಟ್ಟಿಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.ಗೃಹ ಸಚಿವ ಡಾ.ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಾಸೀರ್ ಅಹಮದ್ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − eleven =
Remember me
