ಬೆಂಗಳೂರು: ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸುವ ಕುರಿತ ಮನವಿಯನ್ನು ಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭರವಸೆ ನೀಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಅವರು ಈ ಭರವಸೆ ನೀಡಿದರು.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್, ಯಶಸ್ವಿನಿ ಯೋಜನೆಗೆ ಪತ್ರಕರ್ತರ ಸೇರ್ಪಡೆ, ಮಾಸಾಶನ ಹೆಚ್ಚಳ, ಕಾರ್ಮಿಕ ಇಲಾಖೆಯ ಮೂಲಕ ಅಗತ್ಯ ಸೌಲಭ್ಯಗಳು ಸೇರಿದಂತೆ ಇನ್ನಿತರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಯವರ ಗಮನ ಸೆಳೆದು, ಮನವಿ ಸಲ್ಲಿಸಲಾಯಿತು. ಮನವಿಯಲ್ಲಿನ ಬೇಡಿಕೆಗಳ ಬಗ್ಗೆ ಪರಿಶೀಲಿಸುವುದಾಗಿ ಮುಖ್ಯಮಂತ್ರಿಯವರು ಭರವಸೆ ನೀಡಿದರು.
ಇದನ್ನೂ ಓದಿ:ಇನ್ನು ಹಾಡು ಕೇಳುತ್ತ ಸ್ನಾನ ಮಾಡಲ್ಲ ಎಂದು ಕ್ಷಮೆ ಕೋರಿದ ವಿದ್ಯಾರ್ಥಿನಿ!; ದಯವಿಟ್ಟು ಫೋನ್​ ಹಿಂದಿರುಗಿಸಿ ಎಂದು ಮನವಿ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು. ಅಲ್ಲದೆ ರಾಜ್ಯದ ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ 500 ಕೋಟಿ ರೂ. ಅನುದಾನವನ್ನು ಮೀಸಲಿಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವುದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದರು.
ಇದನ್ನೂ ಓದಿ:18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡರೆ ಕ್ರಮ: ಸಿಎಂ ಎಚ್ಚರಿಕೆ
ಸಂಘದ ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಭವಾನಿಸಿಂಗ್ ಠಾಕೂರ್, ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ್, ಕಾರ್ಯದರ್ಶಿಗಳಾದ ಮತ್ತಿಕೆರೆ ಜಯರಾಂ, ಸೋಮಶೇಖರ ಕೆರಗೋಡು, ನಿಂಗಪ್ಪ ಚಾವಡಿ, ಜಿಲ್ಲಾ ಪದಾಧಿಕಾರಿಗಳಾದ ದಿನೇಶ್ ಗೌಡಗೆರೆ, ಶಿವಕುಮಾರ ಸ್ವಾಮಿ, ಚಲುವರಾಜು, ಸಿ.ಎನ್.ಕುಮಾರ್, ಸೋಮಶೇಖರ ಗಾಂಧಿ, ಜುಕ್ರಿಯಾ, ರಾಜು, ರಾಯಚೂರು ವೀರಾ ರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.
ಇದನ್ನು ಕುಡಿದರೆ ಹೃದಯಾಘಾತದ ಸಾಧ್ಯತೆ ತೀರಾ ಕಡಿಮೆ ಅಂತೆ!; ಏನಿದು, ಎಷ್ಟು ಕುಡಿಯಬೇಕು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 4 =
Remember me
