ಬಸವಕಲ್ಯಾಣ:ಇಲ್ಲಿನ ಮಂಠಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಚೇರಿಯ ಕಟ್ಟಡದ ಮುಂದಿನ ಛಾವಣಿ ಕುಸಿದು 11 ವರ್ಷದ ಬಾಲಕ ಮೃತಪಟ್ಟಿದ್ದು, ಮೂರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರಜ್ವಲ್ ಶ್ರೀನಾಥ್ ಮೃತ ಬಾಲಕ. ದಿನೇಶ್​ ಭೀಮಣ್ಣ (12), ಆಕಾಶ್​ ಭೀಮಣ್ಣ (10), ಚರಣ್​ ತಾನಾಜಿ (10) ತೀವ್ರವಾಗಿ ಗಾಯಗೊಂಡಿದ್ದಾರೆ.ಇದನ್ನೂ ಓದಿ:ಕರೊನಾ ಲಸಿಕೆ, ಖರೀದಿ, ವಿತರಣೆ ನಿರ್ಧರಿಸಲಿದೆ ಈ ಸಮಿತಿ; ಕೇಂದ್ರೀಯ ಟಾಸ್ಕ್​ಪೋರ್ಸ್​ ರಚನೆ
ಗ್ರಾಮದ ಮಹಾದೇವ ಮಂದಿರ ಸಮೀಪ ಇರುವ ಪಿಕೆಪಿಎಸ್​ ಕಟ್ಟಡದ ಮುಂಭಾಗದಲ್ಲಿದ್ದ ಮೇಲ್ಛಾವಣಿ ದಿಢೀರನೆ ಕುಸಿದು ಬಿದ್ದಿದೆ. ಈ ವೇಳೆ ಕಟ್ಟಡದ ಕೆಳಗೆ ನಾಲ್ವರು ಮಕ್ಕಳು ಆಟವಾಡುತ್ತಿದ್ದರು. ಅದರಲ್ಲಿ ಓರ್ವ ಮೃತಪಟ್ಟಿದ್ದು, ಚರಣ ಎನ್ನುವ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ.
ಗಾಯಾಳು ಬಾಲಕರನ್ನು ಬಸವಕಲ್ಯಾಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕಟ್ಟಡ ಸುಮಾರು 40 ವರ್ಷಗಳಷ್ಟು ಹಳೆಯದಾಗಿದ್ದು, ಮಳೆಯಿಂದ ಛಾವಣಿ ಕುಸಿದಿರಬಹುದು ಎಂದು ಶಂಕಿಸಲಾಗಿದೆ. ಸಿಪಿಐ ಮಹೇಶಗೌಡ ಪಾಟೀಲ, ಪಿಎಸ್ಐ ಜಯಶ್ರೀ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಧಾನಿ ಮೋದಿಯವರ ಫೋಟೋ ಟ್ಯಾಂಪರಿಂಗ್​; ಕಾಂಗ್ರೆಸ್​ ನಾಯಕನ ವಿರುದ್ಧ ಎಫ್​ಐಆರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 1 =
Remember me
