ಬೆಂಗಳೂರು :ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು, ಸಂಗೊಳ್ಳಿ ರಾಯಣ್ಣನವರ ಉದಾಹರಣೆ ಮೂಲಕ ಬೆನ್ನಿಗೆ ಚೂರಿ ಹಾಕಲಾಗುತ್ತಿದೆ ಎಂದು ಎರಡು ಬಾರಿ ಹೇಳಿಕೆ ನೀಡಿದ್ದಾರೆ. ಅವರ ಪಕ್ಷದವರೇ ಸಿಎಂಗೆ ಮೋಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್​.ಅಶೋಕ್​ ವ್ಯಂಗ್ಯವಾಡಿದರು.
ಸೋಮವಾರ ಸುದ್ದಿಗಾರರಿಗೆ ಮಾತನಾಡಿದ ಅವರು, ಸಿಎಂ ಕುರ್ಚಿಗೆ ಕಾಂಗ್ರೆಸ್​ ಹಲವರು ಟವಲ್​ ಹಾಕಿದ್ದರೆ, ಡಿಸಿಎಂ ಡಿಕೆಶಿ ಸ್ಟಿಕ್ಟರ್​ ಅಂಟಿಸಿದ್ದಾರೆ.ಮುಡಾ ಪ್ರಕರಣದಲ್ಲಿ ನಾವ್ಯಾರೂ ಆರ್​ಟಿಐ ಅರ್ಜಿ ಹಾಕಿಲ್ಲ. ಅವರ ಪಕ್ಷದವರೇ ಎಲ್ಲ ದಾಖಲೆ ಹೊರಗೆ ತಂದಿದ್ದಾರೆ. ಮ್ಯೂಸಿಕಲ್​ ಚೇರ್​ ಮಾಡುತ್ತಿರುವವರು ಪಟಾಕಿ ಇಡುತ್ತಿದ್ದಾರೆ. ಅವರು ಪಟಾಕಿ ಒಡೆದಾಗ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಗ್ಯಾರಂಟಿಗಳಿಂದ ಹಿಮಾಚಲ ಪ್ರದೇಶ ಆರ್ಥಿಕ ದುಸ್ಥಿತಿಗೆ ತಲುಪಿದೆ. ಕರ್ನಾಟಕ ಪಾಪರ್​ ಆದರೂ ಪರವಾಗಿಲ್ಲ, ನಮ್ಮ ಬೇಳೆ ಬೇಯಬೇಕೆಂದು ಕಾಂಗ್ರೆಸ್​ ಯೋಚಿಸಿದೆ. ರಾಜ್ಯದಲ್ಲಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಕು, ಇಲ್ಲವಾದರೆ ಸ್ವಯಂ ನಿವೃತ್ತಿ ಪಡೆಯಬೇಕೆಂಬ ಪರಿಸ್ಥಿತಿ ಇದೆ.ನಿಷ್ಠಾವಂತ ಅಧಿಕಾರಿಗಳಿಗೆ ಬದುಕುವ ಗ್ಯಾರಂಟಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರೇಟರ್​ ಬೆಂಗಳೂರು ಪ್ರಾಧಿಕಾರ ಅನುಷ್ಠಾನಕ್ಕೆ ಬಿಜೆಪಿ, ಜೆಡಿಎಸ್​ ವಿರೋಧ
ರಾಜ್ಯದಲ್ಲಿ 60 ಲಕ್ಷ ಬಿಪಿಎಲ್​ ಕಾರ್ಡ್​ ರದ್ದುಪಡಿಸಲು ತಯಾರಿ ನಡೆದಿದೆ. ಇದರಿಂದ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಉಳಿತಾಯವಾಗಲಿದೆ. ಬಿಪಿಎಲ್​ ಕುಟುಂಬಗಳಿಗೆ ಈಗಾಗಲೇ ಆಹಾರ ಇಲಾಖೆಯ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ.ಇದಕ್ಕಾಗಿ ಖಾಸಗಿ ಏಜೆನ್ಸಿ ನೇಮಕ ಮಾಡಲಾಗಿದೆ. ಕಾರ್ಡ್​ ರದ್ದುಪಡಿಸಿ ಗ್ಯಾರಂಟಿ ಯೋಜನೆಯ ಹಣ ಉಳಿಸಲಾಗುತ್ತಿದೆ. ಜನರಿಗೆ ಗೊತ್ತಾಗದಂತೆ ತೆರಿಗೆ ವಿಧಿಸುವುದು ಹೇಗೆಂದು ತಂತ್ರ ಮಾಡಲು ಸಮಿತಿ ನೇಮಿಸಲಾಗಿದೆ ಎಂದು ಅಶೋಕ್​ ತಿಳಿಸಿದರು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:16 − one =
Remember me
